ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಆರಂಭವಾಗಿದ್ದರೂ, ಕಾಂಗ್ರೆಸ್ ಸರ್ಕಾರ ಕುಂಭಕರ್ಣನ ನಿದ್ರೆ ಮಾಡುತ್ತಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ಸರ್ಕಾರ ಹರಾಜು ಹಾಕಿದೆ. ಬರಗಾಲದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟಿಸಲಾಗುವುದು: ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ 

ಬೆಂಗಳೂರು(ಮಾ.10):  ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಆರಂಭವಾಗಿದ್ದರೂ, ಕಾಂಗ್ರೆಸ್ ಸರ್ಕಾರ ಕುಂಭಕರ್ಣನ ನಿದ್ರೆ ಮಾಡುತ್ತಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ಸರ್ಕಾರ ಹರಾಜು ಹಾಕಿದೆ. ಬರಗಾಲದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟಿಸಲಾಗುವುದು ಎಂದು ಹೇಳಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿದ ಗೋ ಬ್ಯಾಕ್ ಅಭಿಯಾನ, ಶೋಭಾ ಬಳಿಕ ಹೆಗ್ಡೆ ಟಾರ್ಗೆಟ್

ಯಾವುದೇ ಖಾಸಗಿ ಬೋರ್‌ವೆಲ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರವಿದೆ. ಅದನ್ನು ಮಾಡಲು ಸರ್ಕಾರಕ್ಕೆ ಮನಸ್ಸಿಲ್ಲದಿರುವುದರಿಂದ ಟ್ಯಾಂಕರ್‌ಗಳು ಕಾಳಸಂತೆ ಸೃಷ್ಟಿಸಿವೆ. ಕಲುಷಿತ ನೀರನ್ನು ಜನರಿಗೆ ನೀಡುತ್ತಿದ್ದರೂ ಆರೋಗ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಎಲ್ಲಿಯೂ ತಪಾಸಣೆ ಮಾಡುತ್ತಿಲ್ಲ. ಯಾವ ಬೋರ್‌ವೆಲ್‌ನಲ್ಲಿ ಎಷ್ಟು ಕಲುಷಿತ ಅಂಶ ಇದೆ ಎಂಬುದನ್ನು ತಪಾಸಣೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.