ಮುಡಾ ಹಗರಣ: ಮೈಸೂರಿನಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ, ಸಿಎಂ ಸಿದ್ದು ರಾಜೀನಾಮೆಗೆ ಪಟ್ಟು

ವಿಜಯೇಂದ್ರ, ಅಶೋಕ್ ಸೇರಿದಂತೆ ಮುಖಂಡರು ಹಾಗೂ ಕಾರ್ಯ ಕರ್ತರು ಬೆಂಗಳೂರಿನಿಂದ ಒಟ್ಟಿಗೆ ತೆರಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿಯಿರುವ ನೈಸ್‌ ಜಂಕ್ಷನ್‌ನಲ್ಲಿ ಸೇರಿ ಅಲ್ಲಿಂದ ಎಲ್ಲರೂ ಏಕಕಾಲದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. 
 

bjp will be held protest in mysuru for demanding cm Siddaramaiah resigns on muda scam case grg

ಮೈಸೂರು(ಜು.12):  ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಶಾಸಕರು, ಮುಖಂಡರು, ಕಾರ್ ಕರ್ತರು ಸೇರಿದಂತೆ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಅಲ್ಲದೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಪ್ರತಿಭಟನೆ ಸಂಬಂಧ ಶುಕ್ರವಾರ ಬೆಳಗ್ಗೆ ವಿಜಯೇಂದ್ರ, ಅಶೋಕ್ ಸೇರಿದಂತೆ ಮುಖಂಡರು ಹಾಗೂ ಕಾರ್ಯ ಕರ್ತರು ಬೆಂಗಳೂರಿನಿಂದ ಒಟ್ಟಿಗೆ ತೆರಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿಯಿರುವ ನೈಸ್‌ ಜಂಕ್ಷನ್‌ನಲ್ಲಿ ಸೇರಿ ಅಲ್ಲಿಂದ ಎಲ್ಲರೂ ಏಕಕಾಲದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗ್ಗೆ 10.30ಕ್ಕೆಮಹಾರಾಜ ಕಾಲೇಜು ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. 

ಮುಡಾ, ವಾಲ್ಮೀಕಿ ನಿಗಮ ಹಗರಣವನ್ನು ಸಿಬಿಐ ತನಿಖೆ ನೀಡಿದರೆ ಸತ್ಯಾಂಶ ಹೊರಬರಲಿದೆ: ಸಂಸದ ಯದುವೀರ್ ಒಡೆಯರ್

ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಪ್ರತಿಭಟನಾ ಸಭೆ ನಂತರ ಪಾದಯಾತ್ರೆ ಮೂಲಕ ಎಂಡಿಎ ಕಚೇರಿ ಆವರಣಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಶಾಸಕ ಶ್ರೀವತ್ಸ ತಿಳಿಸಿದರು. ನಾವು ಪ್ರತಿಭ ಟನೆಯಷ್ಟೇ ಮಾಡುತ್ತೇವೆ. ಪ್ರತಿಭಟನೆ ವೇಳೆ ಜನ ಆಕ್ರೋಶಗೊಂಡು ಎಂಡಿಎ ಕಚೇರಿಗೆ ಮುತ್ತಿಗೆ ಹಾಕಬಹುದು. ಅವ ರನ್ನು ತಡೆಯಲಾಗುವುದಿಲ್ಲ.ಪ್ರತಿಭಟನೆಗೆ ಅವಕಾಶ ನೀಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದೇವೆ ಎಂದು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ಹೇಳಿದರು.

ಬಿಜೆಪಿಯವರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಸಜ್ಜು!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮುತ್ತಿಗೆ ಹಾಕುವ ಬಿಜೆಪಿಯವರಿಗೆ ನಾವು ಮುತ್ತಿಗೆ ಹಾಕುತ್ತೇವೆ ಎಂದು ಕೆಪಿಸಿಸಿ ವಕಾರ ಎಂ.ಲಕ್ಷ್ಮಣ ತಿಳಿಸಿದ್ದಾರೆ. ಜು.12ರ ಬೆಳಗ್ಗೆ 10ಕ್ಕೆ ಎಂಡಿಎ ಆವರಣದಲ್ಲಿ ನಾವು ಪ್ರತಿಭಟನೆ ಮಾಡುತ್ತೇವೆ. ಈ ವೇಳೆ ಬಿಜೆಪಿಯವರು ಕಚೇರಿಗೆ ಮುತ್ತಿಗೆ ಹಾಕಲು ಬಂದರೆ ನಾವು ಅವರಿಗೇ ಮುತ್ತಿಗೆ ಹಾಕುತ್ತೇವೆ. ಯಾವುದೇ ಹಗರಣ, ಲೋಪ ನಡೆಯದ ಪ್ರಕರಣದಲ್ಲಿ ಬಿಜೆಪಿಗರು ಅನಗತ್ಯವಾಗಿ ವಿವಾದ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

Latest Videos
Follow Us:
Download App:
  • android
  • ios