Asianet Suvarna News Asianet Suvarna News

ಎರಡೂ ಉಪಚುನಾವಣೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು

  • ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆ(ಐ.ಟಿ.) ದಾಳಿ ನಡೆದಿದೆ ಎಂಬುದು ನಿರಾಧಾರ
  • ಐಟಿ ದಾಳಿಯ ಬಗ್ಗೆ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದು - ಎಸ್‌ ಟಿ ಸೋಮಶೇಖರ್
bjp will win in 2 By Election constituency Says St somashekar snr
Author
Bengaluru, First Published Oct 11, 2021, 7:27 AM IST

ಮೈಸೂರು (ಅ.11): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (bs yediyurappa) ಅವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆ(ಐ.ಟಿ.) ದಾಳಿ ನಡೆದಿದೆ ಎಂಬ ಪ್ರತಿಪಕ್ಷಗಳ ಮುಖಂಡರು ಮಾಡುತ್ತಿರುವ ಆರೋಪಗಳು ನಿರಾಧಾರವಾಗಿವೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ (ST somashekar) ತಿಳಿಸಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯ ಬಗ್ಗೆ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದು, ಅವರನ್ನು ಗುರಿಯಾಗಿಸಿಕೊಂಡು ಐಟಿ (IT) ದಾಳಿ ನಡೆದಿಲ್ಲ. ಐಟಿ ದಾಳಿ ನಿರಂತರ ಪ್ರಕ್ರಿಯೆಯಾಗಿದೆ. ಈ ವಿಚಾರದಲ್ಲಿ ಪ್ರತಿಪಕ್ಷ ನಾಯಕರು ಮಾಡುತ್ತಿರುವ ಆರೋಪಗಳು ನಿರಾಧಾರ. ಐಟಿ ದಾಳಿ ಉಪ ಚುನಾವಣೆ (Bu Election) ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಿಂದಗಿ, ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಇದೇ ವೇಳೆ ಹಾನಗಲ್‌ನಲ್ಲಿ ಮಾಜಿ ಸಚಿವ ದಿವಂಗತ ಸಿ.ಎಂ.ಉದಾಸಿ ಕುಟುಂಬಕ್ಕೆ ಟಿಕೆಟ್‌ ತಪ್ಪಿರುವುದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಟಿಕೆಟ್‌ ಹಂಚಿಕೆ ಹೈಕಮಾಂಡ್‌ ತೀರ್ಮಾನವಾಗಿದೆ. ಹೈಕಮಾಂಡ್‌ ತೀರ್ಮಾನವನ್ನು ಯಾರೂ ಪ್ರಶ್ನಿಸಲಾಗುವುದಿಲ್ಲ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಬ್ಯರ್ಥಿಗಳು ಯಾರು?

 ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿ ಬಸವರಾಜ ಬೊಮ್ಮಾಯಿ  (BasavarajBommai) ಆ ಸ್ಥಾನ ಅಲಂಕರಿಸಿದ ಬಳಿಕ ಎದುರಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (Karnataka BY Election) ಅಖಾಡ ಸಜ್ಜಾಗಿದೆ.

ಉಭಯ ಕ್ಷೇತ್ರಗಳಿಗೆ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಈಗಾಗಲೇ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವುದರಿಂದ ಇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ (BJP) ಗುರುವಾರ ತನ್ನ ಅಭ್ಯರ್ಥಿಗಳ ಪಟ್ಟಿಬಿಡುಗಡೆಗೊಳಿಸಿದೆ.

ಸಿಂದಗಿ, ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಈ ತಿಂಗಳ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ವಾಪಸ್‌ ಪಡೆಯಲು 13 ಕೊನೆಯ ದಿನವಾಗಿದೆ. ಈ ತಿಂಗಳ 30ರಂದು ಮತದಾನ ನಡೆಯಲಿದೆ. ಫಲಿತಾಂಶ ನ.2ರಂದು ಹೊರಬೀಳಲಿದೆ. ಸಿಂದಗಿಯ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ನ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದ ಹಿನ್ನೆಲೆ ಇದೀಗ ಉಪಚುನಾವಣೆ ಎದುರಾಗಿದೆ.

ಬಿಜೆಪಿಯಿಂದ ಹಾನಗಲ್‌ ಕ್ಷೇತ್ರಕ್ಕೆ ಹಾವೇರಿಯ ಮಾಜಿ ಶಾಸಕ ಶಿವರಾಜ್‌ ಸಜ್ಜನರ್‌ (Shiraj sajjanar) ಅವರನ್ನು ಅಚ್ಚರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದು, ಸಿಂದಗಿ ಕ್ಷೇತ್ರದಿಂದ ಮಾಜಿ ಶಾಸಕ ರಮೇಶ್‌ ಭೂಸನೂರು (Ramesh Bhusanur) ಅವರಿಗೆ ಟಿಕೆಟ್‌ ನೀಡಿದೆ. ಇನ್ನು ಕಾಂಗ್ರೆಸ್‌ ಪಕ್ಷ ಸಿಂದಗಿಯಿಂದ ಅಶೋಕ್‌ ಮನಗೂಳಿ ಅವರಿಗೆ ಮತ್ತು ಹಾನಗಲ್‌ನಿಂದ ಶ್ರೀನಿವಾಸ್‌ ಮಾನೆ ಅವರನ್ನು ಕಣಕ್ಕಿಳಿಸಿದೆ.

Follow Us:
Download App:
  • android
  • ios