ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಗೆದ್ದಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ. ದೇಶದಲ್ಲಿ ಬಾಂಬ್ ಸ್ಫೋಟವಾದರೂ ಪ್ರಧಾನಿ ಮೋದಿ ವಿದೇಶಿ ಪ್ರವಾಸ ಮೊಟಕುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಇಂದಿರಾಗಾಂಧಿಯವರನ್ನು ಸ್ಮರಿಸಿದರು. ರಾಜ್ಯ ನಾಯಕತ್ವ ಬದಲಾವಣೆ ಹೈಕಮಾಂಡ್ ನಿರ್ಧಾರ ಎಂದರು.
ಹುಬ್ಬಳ್ಳಿ (ನ.19): ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಗೆದ್ದಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋಸದಿಂದ ಚುನಾವಣೆ ಗೆದ್ದ ಪ್ರಧಾನಿಯನ್ನು ನಾನು ಎಲ್ಲೂ ನೋಡೇ ಇಲ್ಲ, ದೇಶದಲ್ಲಿ ಬಾಂಬ್ ಬ್ಲಾಸ್ಟ್ ಆದಾಗ ಪ್ರಧಾನಿ ಭೂತಾನ್ ರಾಜನ ಹುಟ್ಟುಹಬ್ಬವನ್ನು ಮುಗಿಸಿ ಬಂದಿದ್ದಾರೆ. ದೆಹಲಿ ಸ್ಫೋಟ ಆದಾಗ ಪ್ರಧಾನಿ ವಾಪಾಸ್ ಬರಬಹುದಿತ್ತು ಆದರೆ ವಾಪಾಸ್ ಬರದೇ ಭೂತಾನ್ ಪ್ರಧಾನಿ ಹುಟ್ಟುಹಬ್ಬವೇ ಮುಖ್ಯವಾಗಿತ್ತು ಎಂದು ವಾಗ್ದಾಳಿ ನಡೆಸಿರು.
ಇಂದಿರಾಗಾಂಧಿ ಜನ್ಮದಿನಾಚರಣೆ:
ಇಡೀ ದೇಶದಲ್ಲಿ ಬಡವನಿಗೆ ಭೂಮಿ ಕೊಟ್ಟದ್ದು ಇಂದಿರಾಗಾಂಧಿ ಕೊಡುಗೆ, ಪಾಕಿಸ್ತಾನ ವಿಭಾಗ ಮಾಡಿ ಬಾಂಗ್ಲಾದೇಶ ಮಾಡಿದ್ದು ಇಂದಿರಾಗಾಂಧಿ, ಅವರನ್ನು ಅಟಲ್ ಬಿಹಾರಿ ವಾಜಪೇಯಿ ಐರನ್ ಲೇಡಿ ಎಂದು ಕರೆದಿದ್ದಾರೆ. ಅಂತವರ ಜನ್ಮದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಅಧಿಕಾರ ಬದಲಾವಣೆ ಹೈಕಮಾಂಡ್ ನಿರ್ಧಾರ:
ರಾಜ್ಯದಲ್ಲಿ ಅಧಿಕಾರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ. ಐದು ಪ್ರಮುಖ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ. ಏನು ಆಗುತ್ತದೋ ಕಾದು ನೋಡೋಣ ಎಂದರು. ಇದೇ ವೇಳೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕು. ಆದಷ್ಟು ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕಂಡಿಕೊಳ್ಳಬೇಕು ಎಂದು ತಿಳಿಸಿ


