Asianet Suvarna News Asianet Suvarna News

ಬ್ಲ್ಯಾಕ್‌ ಫಂಗಸ್ಸನ್ನು ಸಾಂಕ್ರಾಮಿಕ ಎಂದು ಘೋಷಿಸಿ: ಎಚ್‌ಡಿಕೆ ಆಗ್ರಹ

* ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ
* ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ತೋರುತ್ತಿರುವ ಆಲಸ್ಯ ಸರಿಯಲ್ಲ
* ಚಿಕಿತ್ಸೆಗೆ ಬೇಕಿರುವ ಔಷಧ ಸಮರ್ಪಕವಾಗಿ ಸಂಗ್ರಹಿಸಬೇಕು

Black Fungus Must Be Declare an Epidemic in Karnataka Says HD Kumaraswamy grg
Author
Bengaluru, First Published May 22, 2021, 8:57 AM IST

ಬೆಂಗಳೂರು(ಮೇ.22): ಮಾರಕ ಕಾಯಿಲೆಯಾದ ಕಪ್ಪು ಶಿಲೀಂಧ್ರ ಸೋಂಕನ್ನು ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈಗಾಗಲೇ ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌ ರಾಜ್ಯಗಳಲ್ಲಿ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸುವಂತೆ ರಾಜ್ಯಗಳಿಗೆ ಹೇಳಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ. ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ ಎಂದು ಅವರು ಟ್ವೀಟ್‌ ಮೂಲಕ ಹೇಳಿದ್ದಾರೆ. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು ಎಂದಿದ್ದಾರೆ.

ರಾಜ್ಯದಲ್ಲಿ ಬ್ಲ್ಯಾಕ್‌ ಫಂಗಸ್‌ನಿಂದ ಯಾರೊಬ್ಬರು ಮೃತಪಟ್ಟಿಲ್ಲ

ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್‌ ಸರ್ಜನ್‌ಗಳು, ನರರೋಗ ತಜ್ಞರು, ದಂತ ವೈದ್ಯರನ್ನು ಸರ್ಕಾರ ಸನ್ನದ್ಧ ರೀತಿಯಲ್ಲಿ ಇಡಬೇಕು ಎಂದಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Follow Us:
Download App:
  • android
  • ios