ಕರ್ನಾಟಕದ ಪಾಲಿಗೆ ಕಳೆದ ಶನಿವಾರ ಬರೀ 'ಕರಾಳ ಶನಿವಾರ' ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ. 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ 37 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಆ.14): ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಅಂದರೆ, 24 ಗಂಟೆಯಲ್ಲಿ ರಾಜ್ಯದಲ್ಲಿ 37 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಟ್ವೀಟ್‌ ಮಾಡಿದ್ದಾರೆ. ಇದು ಬರಿ ಶನಿವಾರವಾಗಿರಲಿಲ್ಲ, ಕರಾಳ ಶನಿವಾರ ಎಂದು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ‘Black staurday’ ಎಂದೇ ಅವರು ಟ್ವೀಟ್‌ ಮಾಡಿದ್ದು, ಭಾನುವಾರ ಬೆಳಗಿನ ಜಾವ ಚಿತ್ರದುರ್ಗದಲ್ಲಿ ಕಾರ್‌ನ ಮತ್ತು ಗೂಡ್ಸ್‌ ಟ್ರಕ್‌ ನಡುವಿನ ಅಪಘಾತದಲ್ಲಿ ಐದು ಜನ ಸಾವು ಕಂಡಿದ್ದಾರೆ. ಅದರೊಂದಿಗೆ 24 ಗಂಟೆಯ ಅವಧಿಯಲ್ಲಿ 37 ಮಂದಿ ರಾಜ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಅಲೋಕ್‌ಕುಮಾರ್‌ ಮಾಹಿತಿ ನೀಡಿದ್ದಾರೆ. ರಸ್ತೆ ಅಪಘಾತಗಳಲ್ಲಿ ಸಾವು ಕಂಡವರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಬೈಕರ್‌ಗಳು ಇದ್ದಾರೆ ಮತ್ತು ಅವರು ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್‌ಗಳನ್ನು ಬಳಸಬೇಕು ಎಂದು ಅವರು ಬರೆದುಕೊಂಡಿದ್ದಾರೆ.

ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಮತ್ತು ಕಾನೂನು ಮತ್ತು ಜಾರಿ ವಿಭಾಗದ ಎಡಿಜಿಪಿ ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ, ಅನನುಭವಿ ಚಾಲಕರು ತಡರಾತ್ರಿ ವಾಹನ ಚಲಾಯಿಸುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು."ಕರಾಳ ಶನಿವಾರ. ಇಂದು ಮುಂಜಾನೆ ಚಿತ್ರದುರ್ಗ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 5 ಸಾವು ಸೇರಿದಂತೆ ರಾಜ್ಯದಲ್ಲಿ 37 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್ ಸವಾರರು ಅತಿ ದೊಡ್ಡ ಪ್ರಮಾಣದಲ್ಲಿ ಸಾವು ಕಾಣುತ್ತಿದ್ದಾರೆ. ಅನನುಭವಿ ಚಾಲಕರು ರಾತ್ರಿ ಚಾಲನೆಯನ್ನು ತಪ್ಪಿಸಬೇಕು. ದ್ವಿಚಕ್ರ ವಾಹನ ಸವಾರರು ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಬಳಸಬೇಕು ಎಂದು ಅಲೋಕ್ ಕುಮಾರ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿತ್ರದುರ್ಗದ ಬಳಿ ಭೀಕರ ದುರಂತ, ಒಂದೇ ಕುಟುಂಬದ ನಾಲ್ವರು ಸೇರಿ 5 ಬಲಿ, ಮೂವರು ಗಂಭೀರ

ಭಾನುವಾರ ಮುಂಜಾನೆ ಚಿತ್ರದುರ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಸರಕು ಸಾಗಣೆ ಮಾಡುವ ಟ್ರಕ್‌ಗೆ ಹಿಂದಿನಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಎಲ್ಲಾ ಐವರೂ ಸಾವು ಕಂಡಿದ್ದರು. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ಒಬ್ಬರಾದ ಸಂಗನಬಸ್ಸಪ್ಪ ಅವರು ತಮ್ಮ ಕುಟುಂಬದೊಂದಿಗೆ ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಟಾಟಾ ನೆಕ್ಸನ್ ಕಾರನ್ನು ಚಲಾಯಿಸುತ್ತಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

ಭಾನುವಾರ ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ, ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು 73 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

Scroll to load tweet…