ಬೈಯಪ್ಪನಹಳ್ಳಿ - ಕೃಷ್ಣರಾಜಪುರ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸೇವೆ ವಿಸ್ತರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಆ.10, 11 ಮತ್ತು 14ರಂದು ಬೆಳಗ್ಗೆ 5ರಿಂದ 7ರವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಬೆಂಗಳೂರು (ಆ.10) ಬೈಯಪ್ಪನಹಳ್ಳಿ - ಕೃಷ್ಣರಾಜಪುರ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸೇವೆ ವಿಸ್ತರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಆ.10, 11 ಮತ್ತು 14ರಂದು ಬೆಳಗ್ಗೆ 5ರಿಂದ 7ರವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌(BMRCL) ತಿಳಿಸಿದೆ.

ಬೈಯಪ್ಪನಹಳ್ಳಿ ಟರ್ಮಿನಲ್‌(Baiyappanahalli Terminal)ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ(Vivekananda road metro station ) ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್‌ (ಕಾಡುಗೋಡಿ) ನಿಲ್ದಾಣದವರೆಗೆ ಬೆಳಗ್ಗೆ 5ರಿಂದ ಬೆಳಗ್ಗೆ 7ರವರೆಗೆ ಸಿಗ್ನಲಿಂಗ್‌ ಮತ್ತು ಇತರ ಸಂಬಂಧಿತ ಕಾಮಗಾರಿ ಪೂರ್ಣಗೊಳಿಸಲು ಆ.10, 11ರವರೆಗೆ ಸ್ಥಗಿತಗೊಳಿಸಲಾಗುವುದು. ಈ ವೇಳೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆ ಲಭ್ಯವಿರಲಿದೆ.

3177 ಕೋಟಿ ವೆಚ್ಚದಲ್ಲಿ 318 ಮೆಟ್ರೋ ಬೋಗಿ ನಿರ್ಮಾಣದ ಗುತ್ತಿಗೆ ಬೆಮೆಲ್‌ಗೆ

ಕೆಂಗೇರಿ ನಿಲ್ದಾಣದಿಂದ ರೈಲು ಸೇವೆಯನ್ನು ಚಲ್ಲಘಟ್ಟನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್‌ ಮತ್ತು ಇತರ ಸಂಬಂಧಿತ ಕಾಮಗಾರಿಗಾಗಿ ಆ.14ರಂದು ಬೆಳಗ್ಗೆ 5ರಿಂದ ಬೆಳಗ್ಗೆ 7ರವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೌಲಭ್ಯ ಇರುವುದಿಲ್ಲ. ಈ ವೇಳೆ ಬೈಯಪ್ಪನಹಳ್ಳಿ-ವಿಜಯನಗರ ನಡುವೆ ಮೆಟ್ರೋ ರೈಲ್ವೇ ಸೌಲಭ್ಯ ಇರಲಿದೆ ಎಂದು ಬೆಂಗಳೂರು ಮೆಟ್ರೋ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.