Asianet Suvarna News Asianet Suvarna News

ಲಾಕ್‌ಡೌನ್‌ ಅಂತ್ಯ: ಇಂದಿನಿಂದ ಬಿಎಂಟಿಸಿ ಸೇವೆ ಆರಂಭ

ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಿಎಂಟಿಸಿ ಬಸ್‌ ಕಾರ್ಯಾಚರಣೆ|ಪ್ರಯಾಣಿಕರು ಬಸ್‌ ಹಾಗೂ ಬಸ್‌ ನಿಲ್ದಾಣಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು| ಮುಖಕ್ಕೆ ಮಾಸ್ಕ್‌ ಧರಿಸಬೇಕು, ಚಾಲನಾ ಸಿಬ್ಬಂದಿಗಳು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್‌ ಧರಿಸಬೇಕು|

BMTC Bus Service Start From today in Bengaluru
Author
Bengaluru, First Published Jul 22, 2020, 7:35 AM IST

ಬೆಂಗಳೂರು(ಜು.22):  ರಾಜಧಾನಿಯಲ್ಲಿ ಲಾಕ್‌ಡೌನ್‌ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ಬಿಎಂಟಿಸಿಯು ಇಂದಿನಿಂದ(ಬುಧವಾರ) ಬಸ್‌ ಸೇವೆ ಪುನರಾರಂಭಿಸುವುದಾಗಿ ತಿಳಿಸಿದೆ. 

ನಗರದಲ್ಲಿ ಕಂಟೈನ್‌ಮೆಂಟ್‌ ವಲಯ ಹೊರತುಪಡಿಸಿ ಉಳಿದೆಡೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ 1,500 ಬಸ್‌ ಕಾರ್ಯಾಚರಣೆ ಮಾಡಲು ತೀರ್ಮಾನಿಸಲಾಗಿದೆ. 

ಪತಿ ಸೋಂಕಿಗೆ ಬಲಿಯಾಗಿ ವಾರದಲ್ಲಿ ಪತ್ನಿ, ಬಿಎಂಟಿಸಿ ಸಿಬ್ಬಂದಿ ಕೊರೋನಾಗೆ ಬಲಿ

ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಈ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಬಸ್‌ ಹಾಗೂ ಬಸ್‌ ನಿಲ್ದಾಣಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಖಕ್ಕೆ ಮಾಸ್ಕ್‌ ಧರಿಸಬೇಕು. ಚಾಲನಾ ಸಿಬ್ಬಂದಿಗಳು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್‌ ಧರಿಸಬೇಕು ಎಂದು ಬಿಎಂಟಿಸಿ ತಿಳಿಸಿದೆ.
 

Follow Us:
Download App:
  • android
  • ios