Asianet Suvarna News Asianet Suvarna News

ಶಾಲೆಗಳಿಗೆ ಬಾಂಬ್ ಬೆದರಿಕೆ; ನಾವು ಸುಮ್ಮನೆ ಕೂರೊಲ್ಲ; ದುಷ್ಕರ್ಮಿಗಳನ್ನ ಪತ್ತೆ ಹಚ್ತೇವೆ: ಡಿಕೆಶಿ

ಬೆಂಗಳೂರಿನ‌ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್‌ ಬೆದರಿಕೆಯಾದರೂ ಸುಮ್ಮನಿರಲು ಆಗುವುದಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಂಡಿದೆ. 24 ಗಂಟೆಯಲ್ಲಿ ಹುಸಿ ಬಾಂಬ್‌ ಬೆದರಿಕೆ ಒಡ್ಡಿದ ದುಷ್ಕರ್ಮಿಗಳನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

Bomb threaten bengaluru schools case DCM DK Shivakumar reaction at bengaluru rav
Author
First Published Dec 3, 2023, 5:23 AM IST

ಬೆಂಗಳೂರು (ಡಿ.3):  ಬೆಂಗಳೂರಿನ‌ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್‌ ಬೆದರಿಕೆಯಾದರೂ ಸುಮ್ಮನಿರಲು ಆಗುವುದಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಂಡಿದೆ. 24 ಗಂಟೆಯಲ್ಲಿ ಹುಸಿ ಬಾಂಬ್‌ ಬೆದರಿಕೆ ಒಡ್ಡಿದ ದುಷ್ಕರ್ಮಿಗಳನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿಯ ನೀವ್ ಅಕಾಡೆಮಿಗೂ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್‌ ಬಂದಿರುವ ಸುದ್ದಿ ತಿಳಿದು ಶಾಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಂದ ಇ- ಮೇಲ್‌ ಸಂದೇಶದ ಮಾಹಿತಿ ಗೊತ್ತಾಯಿತು. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

 

ಆಪರೇಷನ್‌ ತೆಲಂಗಾಣಕ್ಕೆ ಧಾವಿಸಿದ ಡಿಕೆಶಿ ಟೀಮ್‌..!

ಕೆಲವೊಮ್ಮೆ 10 ಹುಸಿ ಬೆದರಿಕೆಗಳ ಪೈಕಿ ಒಂದು ಟಾರ್ಗೆಟ್ ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಹುಸಿ ಬೆದರಿಕೆಗಳನ್ನು ನಾವು ನಿರ್ಲಕ್ಷಿಸುವುದಿಲ್ಲ. ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದರು.

ಹುಸಿ ಬೆದರಿಕೆ ಎಂದು ಸರ್ಕಾರ ಸುಮ್ಮನಿರುವುದಿಲ್ಲ. ಸೂಕ್ತ ತನಿಖೆ ನಡೆಸಿ ಇಂತಹ ಕೃತ್ಯ ಎಸಗಿದ್ದು ಯಾರು ಎಂದು 24 ಗಂಟೆಯೊಳಗೆ ಪತ್ತೆ ಮಾಡಲಾಗುವುದು. ಕೆಲವರು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ, ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ. ಸೈಬರ್‌ ಕ್ರೈಂ ವಿಭಾಗದವರು ಸಕ್ರಿಯವಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು ಎಂದರು 

 

ತೆಲಂಗಾಣ, ರಾಜಸ್ಥಾನದಲ್ಲಿ ಗೆಲ್ಲುವ ಕೈ ನಾಯಕರು ಕರ್ನಾಟಕ ರೆಸಾರ್ಟ್‌ಗೆ ಶಿಫ್ಟ್: ತೆಲಂಗಾಣಕ್ಕೆ ಹೊರಟ ಡಿಕೆಶಿ

ಹುಸಿ ಬಾಂಬ್ ಎಂದು ಸುಮ್ಮನಿರೊಲ್ಲ. ಹತ್ತು ಹುಸಿ ಬಾಂಬ್ ಜೊತೆಗೆ ಒಂದು ಟಾರ್ಗೆಟ್ ಮಾಡಿರುವ ಸಾಧ್ಯತೆ ಇರುತ್ತೆ. ಈ ರೀತಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಯಾರೇ ಇರಲಿ, ಪತ್ತೆ ಹಚ್ಚಿ ಬಂಧಿಸುತ್ತೇವೆ ಎಂದರು.

Follow Us:
Download App:
  • android
  • ios