Anti Conversion Law: ಸಂಪುಟ ಒಪ್ಪಿಗೆ, ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಮುಹೂರ್ತ ಫಿಕ್ಸ್

* ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆ ಅಂತ್ಯ
* ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಒಪ್ಪಿಗೆ
* ನಾಳೆ(ಡಿ.20) ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡ

bommai cabinet clears anti conversion bill to tabled in assembly Session on Dec 21 rbj

 ಬೆಳಗಾವಿ, (ಡಿ.20): ಇಂದಿನ ಸಂಪುಟ ಸಭೆ ((Cabinet Meeting) )ಮುಕ್ತಾಯವಾಗಿದ್ದು, ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ (Karnataka Anti Conversion Bill) ಸಂಪುಟ ಅನುಮೋದನೆ ನೀಡಿದೆ.  

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ನಾಳೆ(ಡಿ.20) ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಲಿದ್ದು, ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ.

Karnataka Anti Aonversion Bill ಇಂದಿನ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಮಸೂದೆಗೆ ನಿಶಾನೆ?

ಈ ವಿಧೇಯಕ ಮಂಡನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ಈ ವಿಧೇಯಕ ಮಂಡನೆಗೆ ಮುಂದಾಗಿದೆ.  ಇದರಿಂದ ಅಧಿವೇಶನದಲ್ಲಿ ವಿರೋಧ ಪಕ್ಷದ ವಿರೋಧಗಳ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಮಂಡನೆಯಾಗುವುದು ನಿಶ್ಚಿತ.

ರಾಜ್ಯ ಸರ್ಕಾರವು ಪ್ರಸ್ತಾಪಿಸಿರುವ ಮತಾಂತರ ನಿಷೇಧ ಮಸೂದೆಯಲ್ಲಿ ಈ ಕೆಳಕಂಡ ಅಂಶಗಳಿವೆ.

1) ಬಲವಂತದ ಮತಾಂತರ ಶಿಕ್ಷಾರ್ಹ ಎಂಬ ಪ್ರಕಾರವೇ ವಿಧೇಯಕ ಸಿದ್ಧತಾ ಹಂತದಲ್ಲಿದೆ
2) ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ
3) ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
4) ಮತಾಂತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ‌ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು
5) ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಛೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿಂಪಡೆಯಲು ಸ್ವತಂತ್ರ
6) ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ
7) ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ
8) ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ
9) ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನುರಹಿತ ಎಂದು ಪರಿಗಣಿಸುವುದು
10) ಮತಾಂತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ
11) ಮತಾಂತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ.

ಬಿಎಸ್‌ವೈ ವಿಶ್ವಾಸ:
ಇನ್ನು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಪರಿಷತ್‌ನಲ್ಲೂ ನಮಗೆ ಬಹುಮತ ಸಿಗುತ್ತದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ ಎಂದು ಬಿಸ್ ಯಡಿಯೂರಪ್ಪ(BS Yediyurappa) ಹೇಳಿದ್ದಾರ.

ಕ್ರೈಸ್ತ ಸಂಘಟನೆಗಳ ವಿರೋಧ
ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಮತಾಂತರ ನಿಷೇಧ ಕಾಯಿದೆ ವಿರೋಧಿಸಿ ಹಾಗೂ ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಯುನೈಟೆಡ್‌ ಕ್ರಿಶ್ಚಿಯನ್‌ ಚರ್ಚಸ್‌ ಆಫ್‌ ಪಾಸ್ಟರ್ಸ್ ಅಸೋಷಿಯೇಷನ್‌ ಹಾಗೂ ಅಖಿಲ ಭಾರತ ಕ್ರೈಸ್ತ ಮಹಾಸಭಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.

ಕೋಮುವಾದಿಗಳಿಗೆ ಕುಮ್ಮಕ್ಕು
ಮತಾಂತರ ಕಾಯ್ದೆ ಜಾರಿಯಾದರೆ ಕೋಮುವಾದಿಗಳು ಬಲಿಷ್ಠರಾಗಿ, ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಅಶಾಂತಿ ಸೃಷ್ಟಿಸುತ್ತಾರೆ. ಬಲವಂತ ಮತಾಂತರದ ಸುಳ್ಳು ದೂರು ದಾಖಲಿಸಿ ಕ್ರೈಸ್ತ ಸಮುದಾಯವನ್ನು ಹಿಂಸಿಸಲಾಗುತ್ತದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕ್ರೈಸ್ತ ಸಮುದಾಯದ ಚರ್ಚುಗಳ ಮತ್ತು ಸಂಘ ಸಂಸ್ಥೆಗಳ ಗಣತಿ ನಡೆಸಬೇಕೆಂದು ಆದೇಶಿಸಿರುವುದರ ಹಿಂದಿನ ಉದ್ದೇಶ, ಗುರಿ ಏನು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. 

Latest Videos
Follow Us:
Download App:
  • android
  • ios