Asianet Suvarna News Asianet Suvarna News

ಗಡಿ ವಿವಾದ ಚುನಾವಣೆಗೆ ಬಳಸಲ್ಲ: ಸಿಎಂ ಬೊಮ್ಮಾಯಿ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ ಬೊಮ್ಮಾಯಿ 

Border Dispute is Not Use or Elections Says CM Basavaraj Bommai grg
Author
First Published Dec 7, 2022, 2:30 AM IST

ಬೆಂಗಳೂರು(ಡಿ.07): ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಮತ್ತು ಶಂಭುರಾಜ್‌ ದೇಸಾಯಿ ಅವರು ಬೆಳಗಾವಿಗೆ ಬಾರದೆ ಇರುವುದಕ್ಕೂ ರಾಜ್ಯದ ವಿಧಾನಸಭೆ ಚುನಾವಣೆಗೂ ಸಂಬಂಧವಿಲ್ಲ. ಈ ವಿಚಾರವನ್ನು ಚುನಾವಣೆಗೆ ಬಳಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಂಗಳವಾರ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 66 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಗಡಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧ್ಯೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

Border Dispute: ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬಂದರೆ ಸೂಕ್ತ ಕ್ರಮ : ಸಿಎಂ ಬೊಮ್ಮಾಯಿ

ನಮಗೆ ಚುನಾವಣಾ ದೃಷ್ಟಿಕೋನವಿಲ್ಲ ಅಥವಾ ವಿವಾದ ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ. ಗಡಿ ಭಾಗದಲ್ಲಿರುವ ಎಲ್ಲ ಕನ್ನಡಿಗರ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಯಾವುದೇ ಕಾರಣಕ್ಕೂ ಶಾಂತಿ ಕದಡಲು ಬಿಡುವುದಿಲ್ಲ ಎಂದರು.

ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಮತ್ತು ಶಂಭುರಾಜ್‌ ದೇಸಾಯಿ ಅವರು ಡಿ.3ರಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿದ್ದರು. ಆ ನಂತರ ಡಿ.6ಕ್ಕೆ ತಮ್ಮ ಭೇಟಿ ಮುಂದೂಡಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಅವರು, ಗಡಿ ವಿವಾದವೂ ನ್ಯಾಯಾಲಯದಲ್ಲಿದೆ. ಅದನ್ನು ಕಾನೂನುಬದ್ಧವಾಗಿ ಹೋರಾಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ಶಿಂಧೆ ಅವರಿಗೆ ಮನವಿ ಮಾಡಿದ್ದ ಬೆನ್ನಲ್ಲೇ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಮುಂದೂಡಿದ್ದಾರೆ ಎನ್ನಲಾಗಿದೆ.
 

Follow Us:
Download App:
  • android
  • ios