ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಫೋನ್ ಪೇ ಸಿಇಒ ಉದ್ಧಟತನ, Uninstall Phonepe ಅಭಿಯಾನ ಟ್ರೆಂಡಿಂಗ್

ಕನ್ನಡಿಗರ ವಿರೋಧಿ ಸಮೀರ್ ನಿಗಮ್ ರ ಫೋನ್ ಪೇಯನ್ನು ಮೊಬೈಲ್ ನಿಂದ ಅನ್‌ ಇನ್ಸ್ಟಾಲ್‌ ಮಾಡಿ ಆತನಿಗೆ ಬುದ್ಧಿ ಕಲಿಸಿ ಎಂಬ ಅಭಿಯಾನ ಆರಂಭವಾಗಿದೆ.

Boycott PhonePe campaign after company CEO sameer nigam opposes Karnataka job quota bill gow

ಬೆಂಗಳೂರು (ಜು.20): ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ  ವಿಧೇಯಕ ಮಂಡನೆ ನಡೆಸಲು ಸಜ್ಜಾಗಿದ್ದ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.

ಸ್ಥಳೀಯರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾಪಕ್ಕೆ ಉದ್ಯಮಿಗಳಾದ ಮೋಹನ್‌ದಾಸ್‌ ಪೈ, ಕಿರಣ್‌ ಮಜುಂದಾರ್‌ ಶಾ, ಆರ್‌.ಕೆ.ಮಿಶ್ರಾ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಉದ್ಯಮಿಗಳ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ.

ಅನಂತ್-ರಾಧಿಕಾ ಅದ್ಧೂರಿಯಲ್ಲಅತೀ ಕಂಜೂಸ್‌ ಮದುವೆ, ಇದು ನಿಜ ಅಂಬಾನಿ ಜಿಪುಣರಲ್ಲೇ ಜಿಪುಣ, ಕಾರಣಗಳು ಹಲವು!

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka Job Reservation) ಜಾರಿಗೆ ಆಗ್ರಹಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳು ಶುಕ್ರವಾರ  ಭಾರೀ ಪ್ರತಿಭಟನೆ ನಡೆಸಿ, ವಿರೋಧಿಸಿದ ಕೈಗಾರಿಕೋದ್ಯಮಿಗಳ ವಿರುದ್ಧ ಆಕ್ರೋಶ ಹೊರ ಹಾಕಿತು.

ಇನ್ನು ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕನ್ನಡಿಗರು ಸಿಡಿದೆದ್ದಿದ್ದು,  ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಆರಂಭವಾಗಿದೆ.

ವಿಶ್ವದ ಅತಿದೊಡ್ಡ ಮಾವು ಬೆಳೆಗಾರ ಮುಕೇಶ್ ಅಂಬಾನಿ, ಇದರ ಹಿಂದಿದೆ ಒಂದು ರೋಚಕ ಕಥೆ!

ಕನ್ನಡಿಗರ ವಿರೋಧಿ ಸಮೀರ್ ನಿಗಮ್ ರ ಫೋನ್ ಪೇಯನ್ನು ಮೊಬೈಲ್ ನಿಂದ ಅನ್‌ ಇನ್ಸ್ಟಾಲ್‌ ಮಾಡಿ ಆತನಿಗೆ ಬುದ್ಧಿ ಕಲಿಸಿ, ಕನ್ನಡಿಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಉದ್ಧಟತನ ತೋರಿದ್ದಾನೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ ಜೊತೆಗೆ 1 ರೇಟಿಂಗ್ ನೀಡಿ ಆ್ಯಪ್ ಡಿಲಿಟ್ ಮಾಡಿ ಎಂದು #UninstallPhonepay ಹ್ಯಾಷ್‌ ಟ್ಯಾಗ್ ಬಳಸಿ ಕ್ಯಾಂಪೇನ್ ನಡೆಸಲಾಗುತ್ತಿದೆ. 

ಫೋನ್‌ ಪೇ ಆ್ಯಪ್ ಸಿಇಒ ಸಮೀರ್‌ ಟ್ವೀಟ್‌ ನಲ್ಲಿ ಏನಿದೆ?
"ನನಗೆ 46 ವರ್ಷ. 15+ ವರ್ಷಗಳ ಕಾಲ ರಾಜ್ಯದಲ್ಲಿ ಎಂದಿಗೂ ವಾಸಿಸಲಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ದೇಶದಾದ್ಯಂತ ಹಲವು ಕಡೆ ಕೆಲಸ ಮಾಡಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ನಿರ್ಮಿಸುತ್ತೇನೆ. ಭಾರತದಾದ್ಯಂತ 25000 ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಅವಮಾನ." ಎಂದಿದ್ದರು.

ಸಮೀರ್‌ ಟ್ವೀಟ್‌ ಕನ್ನಡಿಗರ ಕೋಪಕ್ಕೆ ಗುರಿಯಾಗಿದ್ದು, ಅನೇಕರು ಪೋನ್ ಪೇ ಬಳಸುವುದನ್ನು ನಿಲ್ಲಿಸಿದ್ದಾರೆ. ಜೊತೆಗೆ ತಮ್ಮ ಫೋನ್‌ ನಿಂದ ತೆಗೆದು ಹಾಕಿ ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ.

 

Latest Videos
Follow Us:
Download App:
  • android
  • ios