Asianet Suvarna News Asianet Suvarna News

ಸಂಸತ್‌ ಚುನಾವಣೆವರೆಗೂ ಜಾತಿ ಗಣತಿ ವರದಿಗೆ ಬ್ರೇಕ್‌..!

2018ರ ಚುನಾವಣೆಯ ಕಹಿ ಅನುಭವದ ಪರಿಣಾಮ, ಸದ್ಯಕ್ಕೆ ಜಾತಿ ವಿಚಾರಕ್ಕೆ ಕೈಹಾಕದಿರಲು ಸರ್ಕಾರ ನಿರ್ಧಾರ, ಕಾಂಗ್ರೆಸ್‌ ಎಚ್ಚರಿಕೆ ನಡೆ, ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ, ಇನ್ನೂ ಸಮೀಕ್ಷೆಯ ವರದಿ ಅಂಗೀಕಾರವಾಗಿಲ್ಲ, ಬಿಡುಗಡೆಯೂ ಆಗಿಲ್ಲ, ಅಧಿಕಾರಕ್ಕೆ ಬಂದರೆ ಅಂಗೀಕಾರ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್‌ ಪಕ್ಷ

Break for Caste Census Report till Loksabha Election 2024 grg
Author
First Published Jun 27, 2023, 5:59 AM IST | Last Updated Jun 27, 2023, 5:59 AM IST

ಬೆಂಗಳೂರು(ಜೂ.27): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ‘ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ’ (ಜಾತಿಗಣತಿ) ವಿಚಾರದಲ್ಲಿ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಆರಂಭಿಕ ಸಚಿವ ಸಂಪುಟ ಸಭೆಗಳಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಿರುವ ಜಾತಿಗಣತಿ ವರದಿ ಸ್ವೀಕರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಈ ವೇಳೆ ಬಹುತೇಕ ಸಂಪುಟ ಸದಸ್ಯರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾತಿ ಹಾಗೂ ಧರ್ಮಕ್ಕೆ ಸಂಬಂಧಿಸಿದ ವಿಚಾರಗಳಿಗೆ ಕೈ ಹಾಕದಿರುವುದು ಒಳ್ಳೆಯದು ಎಂಬ ಸಲಹೆ ನೀಡಿದರು.

ಜಾತಿಗಣತಿ ವರದಿ ಬಿಡುಗಡೆಗೆ ಕಾಂಗ್ರೆಸ್‌ನಲ್ಲೇ ವಿರೋಧ: ಬಹುಸಂಖ್ಯಾತರಾದ ಮುಸ್ಲಿಮರು

ಜಾತಿ ಹಾಗೂ ಧರ್ಮದ ವಿಚಾರದಲ್ಲಿ ಸೂಕ್ಷ್ಮವಾಗಿ ನಡೆದುಕೊಳ್ಳುವಲ್ಲಿ ಎಡವಿದ ಕಾರಣ ಕಳೆದ ಚುನಾವಣೆ (2018)ಯಲ್ಲಿ ಕಹಿ ಅನುಭವ ಕಂಡಿದ್ದೇವೆ. ಪರಿಣಾಮ ಸರ್ಕಾರ ಜನಪರ ಆಡಳಿತ ನೀಡಿದ್ದರೂ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲುಣ್ಣಬೇಕಾಯಿತು. ಹೀಗಾಗಿ ಇಂತಹ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ ಎಂದು ಸಲಹೆ ಕೇಳಿ ಬಂದಿತ್ತು ಎನ್ನಲಾಗಿದೆ.

ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಹಾಕುತ್ತಿದೆ. ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದಾಗಿ ರಾಜ್ಯದ ಜನತೆಯು ಕಾಂಗ್ರೆಸ್‌ ಪಕ್ಷದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇದರ ಲಾಭವನ್ನು ಪಡೆಯುವ ಬಗ್ಗೆ ಚಿಂತಿಸಬೇಕು. ಜಾತಿ ಗಣತಿಯಂತಹ ವಿಚಾರಗಳನ್ನು ಸದ್ಯಕ್ಕೆ ಪರಿಗಣಿಸಬಾರದು ಎಂದು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ.

Latest Videos
Follow Us:
Download App:
  • android
  • ios