ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನ ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು (ಜು.4): ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನ ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರಾದ ನ್ಯಾ.ವೀರಪ್ಪ ಅವರು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದಾರೆ ರಾಜ್ಯದಲ್ಲಿ ಎರಡು ಉಪಲೋಕಾಯುಕ್ತ ಹುದ್ದೆಗಳಿಎ ಆ ಪೈಕಿ ಎರಡನೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲಿದ್ದಾರೆ.

ಡೆಂಗ್ಯೂ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಸೂಚನೆ

 ಕರ್ನಾಟಕ ಉಪ ಲೋಕಾಯುಕ್ತ - 2 ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿದ್ದ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್‌ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.