ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF) ಗೆ  ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘಟನೆ ಪತ್ರ ಬರೆದಿದ್ದಾರೆ.

ಬೆಂಗಳೂರು (ಮಾ.12): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF) ಗೆ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘಟನೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಹೊಟೇಲುಗಳಲ್ಲಿ ಹೆಚ್ಚಾಗಿ ನಂದಿನಿ ಹಾಲು ಮತ್ತು ಉತ್ಪನ್ನಗಳನ್ನೇ ಬಳಸುತ್ತಾರೆ. ಆದ್ರೇ ಅಗತ್ಯವಿರುವಷ್ಟು ಪೂರೈಕೆಯಾಗದೆ ಇರುವುದರಿಂದ ಮಾಲೀಕರು ಬಹಳಷ್ಟು ತೊಂದರೆ ಎದುರಿಸುವಂತಾಗಿದೆ. 

ಹಾಲಿನ ಬೇಡಿಕೆ ಹೆಚ್ಚಾಗಿರುವುದರಿಂದ ಹೊರರಾಜ್ಯಗಳಿಗೆ ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿವಂತೆ ಸ್ಥಗಿತಗೊಳಿಸುವಂತೆ ಜೊತೆಗೆ ಹಾಲು ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿರುವುದರಿಂದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಹಾಗೂ ಎಲ್ಲರೂ ನಂದಿನಿ ಹಾಲಿನ್ನೇ ಹೆಚ್ಚಾಗಿ ಬಳಸುತ್ತಿರುವುದರಿಂದ ಅಗತ್ಯವಿರುವಷ್ಟು ಹಾಲಿನ ಬೇಡಿಕೆಯನ್ನು ಪೂರೈಸಬೇಕಾಗಿ ಕೆಎಂಎಫ್‌ಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. 

ಬಡವರ ಹಣ ದೋಚಿದ ಕೇಂದ್ರ ಸಚಿವ ಭಗವಂತ ಖೂಬಾ: ಈಶ್ವರ ಖಂಡ್ರೆ ಆರೋಪ

ನಂದಿನಿ ಹಾಲು, ಮೊಸರು ಕೊರತೆ: ಉತ್ಪಾದನೆಯಲ್ಲಿ ಕುಸಿತ, ಹೆಚ್ಚಿನ ಬೆಲೆಗೆ ಖಾಸಗಿ ಕಂಪನಿಗಳಿಗೆ ಮಾರಾಟ, ಹುಲ್ಲು, ಬೂಸಾ, ಹಿಂಡಿ ಬೆಲೆ ಏರಿಕೆ ಇತ್ಯಾದಿ ಕಾರಣಗಳಿಂದ ನಗರದಲ್ಲಿ ಹಾಲಿನ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬಂದಿದೆ. ರಾಜಧಾನಿ ಬೆಂಗಳೂರಿಗೆ ನಿತ್ಯ 15 ಲಕ್ಷ ಲೀಟರ್‌ ಹಾಲಿನ ಬೇಡಿಕೆ ಇದೆ. ಆದರೆ ಪ್ರಸ್ತುತ ಕೇವಲ 13 ಲಕ್ಷ ಲೀಟರ್‌ ಹಾಲು ಮಾತ್ರ ಪೂರೈಕೆಯಾಗುತ್ತಿದೆ. ಹೀಗಾಗಿ ಹಾಲಿನ ಕೊರತೆಯನ್ನು ನೀಗಿಸಲು ಹೆಚ್ಚಿನ ಹಾಲು ಒದಗಿಸುವಂತೆ ಬಮೂಲ್‌ ಕೆಎಂಎಫ್‌ಗೆ ಮನವಿ ಮಾಡಿದೆ. ಈ ಹಿಂದೆ ಪ್ರತಿ ದಿನ 15ರಿಂದ 16 ಲಕ್ಷ ಲೀಟರ್‌ ಹಾಲು ಸಂಗ್ರಹ ಆಗುತ್ತಿತ್ತು. ಈ ಪೈಕಿ ಹಾಲಿನ ಪೌಡರ್‌ ಮತ್ತು ಚೀಸ್‌ ತಯಾರಿಸಲು ತಲಾ ಒಂದೊಂದು ಲಕ್ಷ ಲೀಟರ್‌ ಹಾಲು ಬಳಸಲಾಗುತ್ತಿತ್ತು. ಆದರೆ ಕಳೆದ 20 ದಿನಗಳಿಂದ ಹಾಲಿನ ಸಂಗ್ರಹ ಕಡಿಮೆಯಾಗಿದೆ. 

ಕೇವಲ 13 ಲಕ್ಷ ಲೀಟರ್‌ ಮಾತ್ರ ಹಾಲು ಸಂಗ್ರಹಯಾಗುತ್ತಿದೆ. ಈ ಕಾರಣದಿಂದ ಹಾಲಿನ ಪೌಡರ್‌ ಮತ್ತು ಚೀಸ್‌ ಉತ್ಪಾದನೆಯನ್ನು 15 ದಿನಗಳಿಂದ ಸ್ಥಗಿತಗೊಳಿಸಲಾಗಿದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದ್ದಾರೆ. ಬಮೂಲ್‌ಗೆ ಪೂರೈಕೆಯಾಗುವ ಹಾಲಿನಲ್ಲಿ 2.10 ಲಕ್ಷ ಲೀಟರ್‌ ಮೊಸರು ತಯಾರಿಸಲು ಬಳಸಲಾಗುತ್ತಿದೆ. 20 ಸಾವಿರ ಲೀಟರ್‌ ಪನ್ನೀರ್‌, ಪೇಡ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ಬಳಸಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ ಜಾರಿಯಲ್ಲಿರುವ ಅಂಗನವಾಡಿ ಮಕ್ಕಳಿಗೆ ಹಾಲು ವಿತರಿಸುವ ವಿಜಯ ವಜ್ರ ಯೋಜನೆಗೆ 40 ಸಾವಿರ ಲೀಟರ್‌ ಪೂರೈಸಲಾಗುತ್ತಿದೆ. ರಾಜ್ಯದಲ್ಲಿನ ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಕ್ಷೀರಭಾಗ್ಯ ಯೋಜನೆಗೆ ಕನಿಷ್ಠ 50 ಸಾವಿರ ಲೀಟರ್‌ ಅಗತ್ಯವಿದೆ ಎಂದು ಮಾಹಿತಿ ನೀಡಿದರು.

ಆಲಮಟ್ಟಿಜಂಗಮರ ಕಥೆಯಂಥಾದ ಕಾಂಗ್ರೆಸ್‌, ಜೆಡಿಎಸ್‌ ಕನಸು: ಸಚಿವ ಗೋವಿಂದ ಕಾರಜೋಳ

ಬೆಂಗಳೂರು ಗ್ರಾಹಕರಿಂದ ಒಟ್ಟಾರೆ 15 ಲಕ್ಷ ಲೀಟರ್‌ ಹಾಲಿಗೆ ಬೇಡಿಕೆ ಇದೆ. ಆದರೆ ಬಮೂಲ್‌ಗೆ ಇನ್ನೂ 2 ಲಕ್ಷ ಲೀಟರ್‌ ಹಾಲಿನ ಕೊರತೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಹೆಚ್ಚಲಿದ್ದು, ಮೇವಿನ ಕೊರತೆ ಸೇರಿದಂತೆ ಮತ್ತಿತರ ಕಾರಣದಿಂದ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಲಿನ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ನಷ್ಟದ ಕಾರಣಕ್ಕೆ ಹೈನುಗಾರಿಕೆ ಬಗ್ಗೆ ರೈತರು ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ .5 ಹೆಚ್ಚಿಸುವಂತೆ 16 ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿದ್ದವು. ಆದರೆ, ರಾಜ್ಯ ಸರ್ಕಾರ ಪ್ರತಿ ಬಾರಿಯೂ ಬೇಡಿಕೆಯನ್ನು ನಿರಾಕರಿಸುತ್ತಾ ಕೊನೆಗೆ ಕೇವಲ 2 ಮಾತ್ರ ಹೆಚ್ಚಿಸಿತ್ತು ಎಂದರು.