ಬೆಂಗಳೂರು(ಜ.05): ರೂಪಾಂತರಿ ಕೊರೋನಾ ವೈರಸ್‌ ಪತ್ತೆಯಾಗಿರುವ ಬ್ರಿಟನ್‌ನಿಂದ ಬೆಂಗಳೂರು ನಗರಕ್ಕೆ ಹಿಂದಿರುಗಿರುವವರ ಪೈಕಿ ಸೋಮವಾರ ಮತ್ತೆ ನಾಲ್ಕು ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 114 ಮಂದಿ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ.

ಬ್ರಿಟನ್‌ನಿಂದ ಡಿ.1ರಿಂದ 21ವರೆಗೆ 1,426 ಆಗಮಿಸಿದ್ದರು. ಡಿ.30 ರಂದು 553 ಮಂದಿ, ಡಿ.31ರಂದು 486 ಮಂದಿ ಆಗಮಿಸಿದ್ದಾರೆ. ಈ ಪೈಕಿ ಡಿ.30 ರಂದು ಆಗಮಿಸಿದ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕರ್ನಾಟಕದಲ್ಲಿ ತಗ್ಗಿದ ಕೊರೋನಾ: ಸೋಮವಾರ ಮೂರಂಕಿಗೆ ಇಳಿದ ಸೋಂಕಿನ ಪ್ರಮಾಣ

ಡಿ.1ರಿಂದ ಈವರೆಗೆ ಬ್ರಿಟನ್‌ನಿಂದ ಬೆಂಗಳೂರು ನಗರಕ್ಕೆ 2465 ಮಂದಿ ಆಗಮಿಸಿದ್ದು, 1,941 ಮಂದಿಯನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 1,536 ಮಂದಿಯನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನೂ 405 ಮಂದಿಯ ಸೋಂಕು ಪರೀಕ್ಷೆ ಬಾಕಿ ಇದೆ. 114 ಮಂದಿ ನಾಪತ್ತೆಯಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.