ಬೆಂಗಳೂರು, (ನ.24): ಮೊನ್ನೇ ಅಷ್ಟೇ ರಚನೆಯಾಗಿರುವ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರದ ರಚನೆ ಬೆನ್ನಲ್ಲೇ ಸಚಿವರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮತಿ ನೀಡಿದ್ದರು. ಅಲ್ಲದೇ ನಿಗಮಕ್ಕೆ 500 ಕೋಟಿ ರೂ. ಅನುದಾನವನ್ನೂ ಸರ್ಕಾರ ಬಿಡುಗಡೆ ಮಾಡಿತ್ತು.

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

ಇದರ ಬೆನ್ನಲ್ಲೇ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ನೇಮಕಾತಿ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಬೆಂಗಳೂರಿನ ವಿಜಯನಗರ ನಿವಾಸಿ ಬಿ.ಎಸ್.ಪರಮಶಿವಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.