Asianet Suvarna News Asianet Suvarna News

ಲೋಕಸಭಾ ಚುನಾವಣೆ : ಅಚ್ಚರಿಗೆ ಕಾರಣವಾದ ಬಿಎಸ್ ವೈ ನಡೆ

ಲೋಕಸಭಾ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದೇ  ಬೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಡೆ ಅಚ್ಚರಿಗೆ ಕಾರಣವಾಗಿದೆ. 

BS Yeddyurappa Starts Campaign For Son BY Raghavendra
Author
Bengaluru, First Published Oct 7, 2018, 11:11 AM IST
  • Facebook
  • Twitter
  • Whatsapp

ಶಿವಮೊಗ್ಗ: ಲೋಕಸಭಾ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ.ರಾಘವೇಂದ್ರ ಅವರನ್ನೇ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. 

ಶಿವಮೊಗ್ಗ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿ ಆಯ್ಕೆ ಆಗದೇ ಹೋದರೂ ರಾಘವೇಂದ್ರ ಪರ ಬಿಎಸ್‌ವೈ ಮತಯಾಚನೆ ಆರಂಭಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಶನಿವಾರ ಶಿಕಾರಿಪುರ ತಾಲೂಕು ಮಾರವಳ್ಳಿಯಲ್ಲಿ ನೀರಾವರಿ ಯೋಜನೆಯ ಡಿಪಿಆರ್ ಸಿದ್ಧಪಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚುನಾವಣೆ ಪ್ರಸ್ತಾಪ ಮಾಡಿದ ಅವರು ಪುತ್ರ ರಾಘವೇಂದ್ರಗೆ ಮತ ನೀಡಿ ಗೆಲ್ಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಮಧ್ಯಾಹ್ನ 3 ಗಂಟೆ ವೇಳೆಗೆ ಶಿವಮೊಗ್ಗಸೇರಿ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿತು. ಇದಾದ ಒಂದು ಗಂಟೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಚುನಾವಣಾ ಪ್ರಚಾರ ಆರಂಭಿಸಿ ಬಿಟ್ಟರು

Follow Us:
Download App:
  • android
  • ios