ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮೂರು ದಿನಗಳ ಪ್ರವಾಸ  ಮೂರು ದಿನಗಳ ಪ್ರವಾಸಕ್ಕಾಗಿ ಮಾಲ್ಡೀವ್ಸ್ ಗೆ ತೆರಳಿದ  ಬಿ.ಎಸ್‌.ಯಡಿಯೂರಪ್ಪ

 ಬೆಂಗಳೂರು (ಆ.19): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಮಾಲ್ಡೀವ್ಸ್ ಗೆ ತೆರಳಿದ್ದಾರೆ. 

ಬುಧವಾರ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಕೆಲವು ಸ್ನೇಹಿತರು ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಯಡಿಯೂರಪ್ಪನವರನ್ನು ರಾಜೀನಾಮೆ ಕೊಡಿಸಿದ್ದೇ ಐಟಿ, ಇಡಿ, ಸಿಬಿಐಗಳ ಬೆದರಿಕೆಯೊಡ್ಡಿ'

 ಯಡಿಯೂರಪ್ಪ ಅವರು 2019ರ ಜು.26ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿರಲಿಲ್ಲ. 

ಕೋವಿಡ್‌ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿದ್ದರೂ ಆಡಳಿತ ನಿರ್ವಹಣೆಯಲ್ಲಿ ನಿರತರಾಗಿದ್ದರು. ಇದೀಗ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ಅವರು ವಿಶ್ರಾಂತಿಗಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬರುವ ಗಣೇಶ ಚತುರ್ಥಿ ಬಳಿಕ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಇಷ್ಟು ದಿನಗಳ ರಾಜಕೀಯ ಜಂಜಾಟದಿಂದ ಇದೀಗ ಕೊಂಚ ಬ್ರೇಕ್ ತೆಗೆದುಕೊಂಡು ಪ್ರವಾಸ ತೆರಳಿದ್ದಾರೆ.