ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯ ಪ್ರಮುಖ ಆದ್ಯತೆ ಕೊರೋನಾ ವೈರಸ್ ನಿಯಂತ್ರಣಕ್ಕೆ ಮೀಸಲಿಡಲಾಗಿತ್ತು. ಇದರ ಜೊತೆಗೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ನೀರಾವರಿ ಯೋಜನೆಗೆ ಸಿಂಹಪಾಲು ಹಣ ಮೀಸಲಿಡಲಾಗಿದೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡ ಪ್ರಮಖ ಯೋಜನೆಗಳು ಹಾಗೂ ಹಣಕಾಸಿನ ಒಪ್ಪಿಗೆ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಬೆಂಗಳೂರು(ಮಾ.27): ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವೈರಸ್ ನಿಯಂತ್ರಣದ ಜೊತೆಗೆ ಇತರ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ರಾಜ್ಯದ ನೀರಾವರಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಪ್ರಮುಖವಾಗಿ ಮಹದಾಯಿ ಯೋಜನೆಗೆ ಬಂಪರ್ ಗಿಫ್ಟ್ ನೀಡಲಾಗಿದೆ.
BSY ಸಚಿವ ಸಂಪುಟ ಸಭೆ; ಮಹತ್ವದ ನಿರ್ಧಾರ ಪ್ರಕಟಿಸಿದ CM!
ಮಹದಾಯಿ ಜೊತೆಗೆ ಬಂಡೂರಿ ನಾಲಾ, ಕಳಸಾ ನಾಲಾ, ಭೀಮಾ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗೆ ಅನುಮೋದನೆ ಸಿಕ್ಕಿದೆ. ಇದರ ಜೊತೆಗೆ ಮಂಡ್ಯದ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಕಂಪಿಗೆ ಗುತ್ತಿಗೆ ನೀಡಲು ಒಪ್ಪಿಗೆ ಪಡೆಯಲಾಗಿದೆ.
ಸಂಪುಟ ಸಭೆಯ ಮಹತ್ವದ ತೀರ್ಮಾನಗಳು
- ಮಂಡ್ಯದ ಮೈ ಶುಗರ್ ಕಾರ್ಖಾನೆಯನ್ನ LROT ಆಧಾರದ ಮೇಲೆ ಖಾಸಗಿ ಕಂಪನಿಗೆ 40 ವರ್ಷ ಅವಧಿಗೆ ಗುತ್ತಿಗೆ ನೀಡಲು ಕ್ಯಾಬಿನೆಟ್ ಒಪ್ಪಿಗೆ
- ಮಹದಾಯಿ ಯೋಜನೆಗೆ ವಿಶೇಷ ಒತ್ತು
- 799 ಕೋಟಿ ಮೊತ್ತದ ಬಂಡೂರಿ ನಾಲಾ ತಿರುವು ಯೋಜನೆಗೆ ಒಪ್ಪಿಗೆ
- 855.80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಗೆ ಒಪ್ಪಿಗೆ
- 964 ಕೋಟಿ ಮೊತ್ತದ ಭೀಮಾ ಏತನೀರಾವರಿ ಯೋಜನೆಗೆ ಒಪ್ಪಿಗೆ
