ನಾಲ್ಕನೇ ಅವಧಿಗೆ ಭಾರತ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರವು ಮಾರ್ಗಸೂಚಿಯನ್ನು ಹೊರಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಿಢೀರ್ ಸಭೆ ಕರೆದಿದ್ದಾರೆ.

ಬೆಂಗಳೂರು, (ಮೇ.17):  ಕೊರೋನಾ ತಡೆಗಟ್ಟುವ ಸಲುವಾಗಿ ಮೇ.31ರ ವರೆಗೆ ಭಾರತ ಲಾಕ್ ಡೌನ್ ವಿಸ್ತರಿಸಲಾಗಿದ್ದು, ಕೇಂದ್ರ ಸರ್ಕಾರ 4.9 ಲಾಕ್‌ಡೌನ್ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಇದರ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ದಿಢೀರ್ ಸೋಮವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದು, ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಸಭೆ ನಡೆಯಲಿದೆ.

ಮೋದಿ ಹೇಳಿದಂತೆ ಮೇ.31ರ ವರೆಗೆ ಲಾಕ್‌ಡೌನ್ ವಿಸ್ತರಣೆ‌: ಏನಿರುತ್ತೆ? ಏನಿರಲ್ಲ?

ಈ ಸಭೆಯಲ್ಲಿ ಮುಂದಿನ ಹಂತದ ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.

Scroll to load tweet…

ಕರ್ನಾಟಕದಲ್ಲೂ ಕೂಡಾ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರದ 4.0 ಗೈಡ್‌ಲೈನ್ಸ್‌ಗಳನ್ನೇ ಜಾರಿಗೊಳಿಸುತ್ತೋ ಅಥವಾ ಕೆಲವಂದಿಷ್ಟು ಸಡಿಲಿಕೆ ಮಾಡುತ್ತೋ ಎನ್ನುವುದು ಸಭೆಯ ಬಳಿಕ ತಿಳಿಯಲಿದೆ.

ಕಂಟೇನ್ಮೆಂಟ್ ಝೋನ್ ಗಳಲ್ಲಿ ಫುಲ್ ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲಿಸಿ, ಉಳಿದ ಕಡೆಗಳಲ್ಲಿ ಸಡಿಲಿಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಈಗಾಗಲೇ ಬಿಎಂಟಿಸಿ ಹಾಗೂ ಕೆಎಎಸ್‌ಆರ್‌ಟಿಸಿ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುಂವತೆ ಸರ್ಕಾರ ಸೂಚಿಸಿದ್ದು, ಬಸ್ ಸಂಚಾರಕ್ಕೆ ಅನುಮತಿ ನೀಡಬೇಕೋ? ಬೇಡವೋ ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಒಟ್ಟಿನಲ್ಲಿ ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್‌ ಹೇಗಿರಲಿದೆ? ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಯಾವೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತೆ ಎನ್ನುವುದು ಭಾರಿ ಕುತೂಹಲ ಮೂಡಿಸಿದೆ.