ಕಾರ್ಮಿಕರ ರಕ್ಷಣೆಗಾಗಿ ಸಹಾಯವಾಣಿ: ಕರೆ ಮಾಡಿ ನಿಮ್ಮ ಕಷ್ಟ ಹೇಳಿ...!

ಲಾಕ್‌ಡೌನ್‌ನಿಂದಾಗಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಸಹಾಯವಾಣಿ ಆರಂಭಿಸಿದೆ.

BS Yediyurappa launches helpline Number For labours

ಬೆಂಗಳೂರು, (ಏ.27): ಕೊರೋನಾ ಲಾಕ್‌ಡೌನ್‌ನಿಂದಾಗಿ ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿರುವ ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಸುಮಾರು ಒಂದು ತಿಂಗಳಿನಿಂದ ಕೆಲಸವಿಲ್ಲದೆ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ಇದರಿಂದ ಎಚ್ಚೆತ್ತ ರಾಜ್ಯ ಕಾರ್ಮಿಕ ಇಲಾಖೆ, ಅವರಿಗಾಗಿಯೇ ಸಹಾಯವಾಣಿಯೊಂದು ಪ್ರಾರಂಭಿಸಿದೆ. ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ್ ಅವರು ಇಂದು (ಸೋಮವಾರ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಯಲ್ಲಿ ಸಹಾಯವಾಣಿಗೆ ಚಾಲನೆ ನೀಡಿದರು.

ಮೇ.3ರ ಬಳಿಕವೂ ಕುಡುಕರಿಗೆ ಲಾಕ್‌ಡೌನ್, ಅಮೀರ್‌ಗೆ ಎಚ್ಚರಿಸಿದ್ದ ಕಿಂಗ್ ಖಾನ್; ಏ.27ರ ಟಾಪ್ 10 ಸುದ್ದಿ!

ಈ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಮೊದಲಾದವರು ಉಪಸ್ಥಿತರಿದ್ದರು.

ಹೊರರಾಜ್ಯದಲ್ಲಿ ಸಿಲುಕಿರುವ ಕಟ್ಟಡ ಹಾಗೂ ಇತರೆ ಕಾರ್ಮಿಕರು 080 22636800 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಯನ್ನು ತಿಳಿಸಬಹುದು. ಕರೆ ತಂದ ತಕ್ಷಣ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಯನ್ನು ಸಂಪರ್ಕಿಸಿ, ತಮ್ಮ ಸಮಸ್ಯೆಯನ್ನು ಪರಿಹರಿಸಲಾಗುವುದು.

 ಇನ್ನು ಲಾಕ್‌ಡೌನ್‌ನಿಂದಾಗಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯದ ಸುಮಾರು 71 ಸಾವಿರ ಕಾರ್ಮಿಕರ ಬ್ಯಾಂಕ್‌ ಖಾತೆಗೆ ರಾಜ್ಯ ಸರ್ಕಾರ ತಲಾ 2,000 ರೂ.ಗಳನ್ನು  ರಾಜ್ಯ ಸರ್ಕಾರ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Latest Videos
Follow Us:
Download App:
  • android
  • ios