ಬೆಂಗಳೂರು (ಆ.22): ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಸತ್ಯ ಸಂಗತಿಗಳು ಮತ್ತಷ್ಟುಹೊರಬಂದ ಮೇಲೆ ರಾಜಕಾರಣ ಮಾಡುತ್ತಿರುವವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ.

 ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಲಭೆ ವಿಚಾರದಲ್ಲಿ ಇನ್ನಷ್ಟುಸತ್ಯ ಸಂಗತಿಗಳು ತನಿಖೆಯ ಬಳಿಕ ಬರಲಿವೆ. ಆಗ ರಾಜಕಾರಣ ಮಾಡುತ್ತಿರುವುದು ನಾವಾ ಅಥವಾ ಅವರಾ ಎಂಬುದು ಗೊತ್ತಾಗುತ್ತದೆ ಎಂದು  ಹೇಳಿದರು. 

ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ, ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ...

ಜನರಿಗೆ ಗಲಭೆ ಪ್ರಕರಣದಲ್ಲಿ ನಡೆದಿರುವ ಸತ್ಯ ಸಂಗತಿಯನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ತನಿಖೆಯಾಗುತ್ತಿದ್ದಂತೆ ಹಲವು ಸಂಗತಿಗಳು ಹೊರಬರುತ್ತಿವೆ. ಹಲವು ಆರೋಪಿಗಳು ಬೇರೆ ಬೇರೆ ವ್ಯವಹಾರ ಮಾಡುತ್ತಿರುವುದು ಗೊತ್ತಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಾನೂನು ಕ್ರಮ ಜರುಗಿಸಲಿದೆ ಎಂದು ಯಡಿಯೂರಪ್ಪ ತಿಳಿಸಿದರು.