ಕಲ್ಯಾಣದ ಅಭಿವೃದ್ಧಿಗೆ ಬಜೆಟ್‌ ಪೂರಕ: ಸಚಿವ ಈಶ್ವರ್ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಿರುವುದು ಈ ಭಾಗದ ಜನರಲ್ಲಿ ಅಭಿವೃದ್ಧಿಯ ಭರವಸೆ ಮೂಡಿಸಿದೆ ಎಂದು ತಿಳಿಸಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿಗೆ ಧನ್ಯವಾದ ತಿಳಿಸಿದ್ದಾರೆ.

Budget complements the development of Kalyan Karnataka says eshwar khandre rav

ಬೀದರ್‌ (ಜು.8) : ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಿರುವುದು ಈ ಭಾಗದ ಜನರಲ್ಲಿ ಅಭಿವೃದ್ಧಿಯ ಭರವಸೆ ಮೂಡಿಸಿದೆ ಎಂದು ತಿಳಿಸಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿಗೆ ಧನ್ಯವಾದ ತಿಳಿಸಿದ್ದಾರೆ.

ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಈ ನಿರ್ಧಾರ ಅಸಮತೋಲನ ನಿವಾರಣೆಗೆ ಪೂರಕವಾಗಿದೆ, ಈ ಹಿಂದೆ ಮಂಜೂರಾದ ಹಣವೂ ಖರ್ಚಾಗದೆ ಹಾಗೇ ಉಳಿಯುತ್ತಿತ್ತು, ಈಗ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂಬುವದು ಬಜೆಟ್‌ನಲ್ಲೇ ಖಾತ್ರಿಯಾಗಿದೆ ಎಂದು ತಿಳಿಸಿದ್ದಾರೆ.

Karnataka budget 2023: ಬೀದರ್ ಜಿಲ್ಲೆಗೆ ಹಳೆಯ ಯೋಜನೆಗಳೇ ಪುನರಾವರ್ತನೆ, ಬಹುತೇಕ ನಿರ್ಲಕ್ಷ್ಯ!

ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ ಲಿಂಗಸುಗೂರು ರಸ್ತೆ ವೃತ್ತದವರೆಗೆ ಒಟ್ಟು 78 ಕಿ.ಮೀ. ಉದ್ದದ ರಸ್ತೆಯನ್ನು 1,696 ಕೋಟಿ ರು.ವೆಚ್ಚದಲ್ಲಿ ಹೈಬ್ರಿಡ್‌ ಆನ್ಯುಟಿ ಮಾದರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಅಭಿವೃದ್ಧಿ ಪಡಿಸುವುದಾಗಿ ಘೋಷಿಸಿರುವುದು ಈ ಭಾಗದ ಸಂಪರ್ಕಾಭಿವೃದ್ಧಿಯಲ್ಲಿ ಕ್ರಾಂತಿಯನ್ನೇ ತರಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಒತ್ತು:

ಬೀದರ್‌ನಲ್ಲಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶ ನಿರ್ಮಾಣ. ಕಲ್ಯಾಣ ಕರ್ನಾಟಕ ಭಾಗದ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ, ಮತ್ತು ಮಳಕೇಡ, ಬೀದರ್‌, ರಾಯಚೂರು, ಕಲಬುರಗಿ, ಕೋಟೆಗಳ ಸಮಗ್ರ ಅಭಿವೃದ್ಧಿಗೆ 75 ಕೋಟಿ ರು. ಒದಗಿಸಲಾಗಿದ್ದು, ಇದರಿಂದ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಅನುವಾಗುತ್ತದೆ. ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವುದರಿಂದ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಗೆ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುತ್ತದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯ ವಿಠ್ಠಲ ದೇವಾಲಯ, ಬೀದರ್‌ ಕೋಟೆಯಲ್ಲಿ ರಾತ್ರಿಯ ವೇಳೆ 3 ಡಿ ಪೊ›ಜೆಕ್ಷನ್‌ ಮಲ್ಟಿಮೀಡಿಯಾ ಧ್ವನಿ ಬೆಳಕಿನ ಪ್ರದರ್ಶನ ಯೋಜನೆಯೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣ ನಿರ್ಮಾಣ ಮಾಡುವುದು ಕೂಡ ಈ ಭಾಗದ ನೈರ್ಮಲ್ಯ ಕಾಪಾಡುವಲ್ಲಿ ಮತ್ತು ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ.

Karnataka budget 2023: ಗಣಿ ಜಿಲ್ಲೆ ಬಳ್ಳಾರಿಗೆ ನಿರಾಸೆ ಮೂಡಿಸಿದ ಬಜೆಟ್. ಯಾವುದೇ ನಿರ್ದಿಷ್ಟ ಯೋಜನೆಗಳ ಪ್ರಸ್ತಾಪವಿಲ್ಲ

ಎಲ್ಲ ಗ್ಯಾರಂಟಿಗಳ ಅನುಷ್ಠಾನದ ಸ್ಪಷ್ಟಮುನ್ನೋಟದೊಂದಿಗೆ, ಜನರಿಗೆ ಹೊರೆಯಾಗದಂತಹ ಬಜೆಟ್‌ ಮಂಡಿಸಿದ್ದಾರೆ. ಜೊತೆಗೆ ಕೃಷಿ, ಉದ್ಯೋಗ ಸೃಷ್ಟಿ, ಬಂಡವಾಳ ಆಕರ್ಷಣೆಗೆ ಒತ್ತು ನೀಡಿದ್ದಾರೆ, ರೈತರ, ಕಾರ್ಮಿಕರ ಹಿತಕಾಯುವ ಈ ಬಜೆಚ್‌, ಮಹಿಳೆಯರ ಮತ್ತು ದುರ್ಬಲರ ಸಬಲೀಕರಣಕ್ಕೂ ಸಾಕಷ್ಟುಆಧ್ಯತೆ ನೀಡಿದೆ. ಸಾಮಾಜಿಕ ನ್ಯಾಯವನ್ನೂ ಎತ್ತಿಹಿಡಿದಿದೆ ಹಿÀಡಿಜ್ಞ್ಡ ಇದೊಂದು ದೂರದರ್ಶಿತ್ವದ ಬಜೆಟ್‌ ಎಂದು ಬಣ್ಣಿಸಿದ್ದಾರೆ.

Latest Videos
Follow Us:
Download App:
  • android
  • ios