ಬುರುಡೆ ಪ್ರಕರಣದಲ್ಲಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ತನ್ನ ಅಣ್ಣ ತಾನಾಸಿ ಹೆಸರು ಪ್ರಸ್ತಾಪಿಸಿದ್ದರಿಂದ ಪೊಲೀಸರು ತಾನಾಸಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬುರುಡೆ ಪ್ರಕರಣದ ಮಾಸ್ಕ್‌ಮ್ಯಾನ್ ಅಲಿಯಾಸ್ ಚಿನ್ನಯನನ್ನು ಈಗಾಗಲೇ ನ್ಯಾಯಾಲಯ ಎಸ್‌ಐಟಿ ಕಸ್ಟಡಿಗೆ ನೀಡಿದೆ. ಆದರೆ ಈ ಪ್ರಕರಣದ ವಿಚಾರಣೆ ವೇಳೆ ಮಾಸ್ಕ್‌ಮ್ಯಾನ್ ಚಿನ್ನಯ್ಯ ತನ್ನ ಅಣ್ಣ ತಾನಾಸಿ ಅವರ ಹೆಸರನ್ನು ಪ್ರಸ್ತಾಪ ಮಾಡಿದ ಹಿನ್ನೆಲೆ ಈಗ ಪೊಲೀಸರು ಚಿನ್ನಯ್ಯನ ಅಣ್ಣ ತಾನಾಶಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಎಸ್‌ಐಟಿ ಚಿನ್ನಯ್ಯನ ವಿಚಾರಣೆ ನಡೆಸುತ್ತಿದ್ದ ವೇಳೆ ಆತ ತನ್ನ ಅಣ್ಣ ತಾನಾಸಿ ಹೆಸರು ಪ್ರಸ್ತಾಪ ಮಾಡಿದ್ದ,ನಾನು ಹೆಣ ಹೂತಿದ್ದು ನನ್ನ ಅಣ್ಣ ತಾನಾಸಿಗೂ ಗೊತ್ತಿತ್ತು ಎಂದು ಚಿನ್ನಯ್ಯ ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆಯ ವಿಚಾರಣೆಗಾಗಿ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ತಾನಾಸಿ ಶವ ಹೂತಿದ್ದು ನನಗೆ ಗೊತ್ತೇ ಇಲ್ಲ ಎಂದಿದ್ದಾರೆ ಎಂಬ ಮಾಹಿತಿ ಇದೆ.
ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ತಾನಾಸಿ ಶವ ಹೂತಿದ್ದು ನನಗೆ ಗೊತ್ತೇ ಇಲ್ಲ ಎಂದಿದ್ದಾರೆ ಎಂಬ ಮಾಹಿತಿ ಇದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ನಿನ್ನೆಯಿಂದಲೇ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಆತ ದುಡ್ಡಿಗಾಗಿ ಗಿರೀಶ್ ಮಟ್ಟಣವರ್ ಹಾಗೂ ಮಹೇಶ್ ತಿಮರೋಡಿ ಮಾತು ಕೇಳಿ ಈ ಕೃತ್ಯವೆಸಗಿದ್ದಾಗಿ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದರು.
ಬಂಧನದ ನಂತರ ಆತನನ್ನು ವೈದ್ಯಕೀಯ ತಪಾಸಣೆ ನಡೆಸಿ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವೂ ಆತನನ್ನು 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 3ರವರೆಗೆ ಆತ ಎಸ್‌ಐಟಿ ಕಸ್ಟಡಿಯಲ್ಲಿ ಇರಲಿದ್ದಾನೆ. ಈ ಎಸ್‌ಐಟಿ ವಿಚಾರಣೆ ವೇಳೆ ಆತ ತಾನು ಹೆಣ ಹೂಳಿದ ವಿಚಾರ ಅಣ್ಣನಿಗೂ ಗೊತ್ತಿತ್ತು ಎಂದು ಹೇಳಿದ ಹಿನ್ನೆಲೆಯಲ್ಲಿ ಆತನ ಸೋದರ ತಾನಾಸಿಯನ್ನು ಈಗ ಎಸ್‌ಐಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ ಮಾಸ್ಕ್ ಮ್ಯಾನ್ ಮಂಡ್ಯ ಮೂಲದ ಚಿನ್ನಯ್ಯನನ್ನು ಇಂದು ಪೊಲೀಸರು ವಿಚಾರಣೆ ನಂತರ ಬಂಧಿಸಿದ್ದರು. ಸಾಕ್ಷಿ ಸಂರಕ್ಷಣಾ ಕಾಯ್ದೆ ರದ್ದುಗೊಂಡ ಬಳಿಕ ಚಿನ್ನಯ್ಯನ ಹೇಳಿಕೆ ಸುಳ್ಳು ಎಂದು ಸಾಬೀತಾದ ನಂತರ ಎಸ್‌ಐಟಿ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಬಂಧಿಸಿತ್ತು. ಇದರ ಜೊತೆ ಈ ಬುರುಡೆ ಗ್ಯಾಂಗ್‌ನ ಮತ್ತೊಬ್ಬ ಸದಸ್ಯ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.
ಧರ್ಮಸ್ಥಳದ ಕೇಸಿನಲ್ಲಿ ನಾನೊಬ್ಬ ಸಾಕ್ಷಿದಾರ ಎಂದು ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಪೊಲೀಸರಿಂದ ರಕ್ಷಣೆ ಪಡೆದುಕೊಂಡಿದ್ದ ಅನಾಮಿಕನನ್ನು ಪೊಲೀಸರು ಬಂಧನ ಮಾಡದೇ, ವಶಕ್ಕೂ ಪಡೆಯದೇ ಸ್ವತಂತರವಾಗಿ ಬಿಟ್ಟಿದ್ದರು. ಆದರೆ ಆತ 17 ಗುಂಡಿ ತೆಗೆಸಿದರು ಏನೂ ಸಿಗದೇ ಇರುವುದು ಜೊತೆಗೆ ಆತನ ಹೇಳಿಕೆಗಳಲ್ಲಿ ಗೊಂದಲ ಇರುವುದು ಎಲ್ಲವೂ ತನಿಖೆ ವೇಳೆ ಕಂಡು ಬಂದ ಹಿನ್ನೆಲೆ ಚುರುಕಾದ ಎಸ್‌ಐಟಿ ಅಧಿಕಾರಿಗಳು ಆತನಿಗೆ ನೀಡಲಾಗಿದ್ದ ಸಾಕ್ಷಿ ಸಂರಕ್ಷಣಾ ಕಾಯ್ದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ ರದ್ದುಗೊಳಿಸಿದರು ಇದಾದ ಬೆನ್ನಲ್ಲಿಯೇ ಮುಸುಕುಧಾರಿ ಅನಾಮಿಕನನ್ನು ಬಂಧನ ಮಾಡಲಾಗಿತ್ತು. ಇದಾದ ನಂತರ ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದೂ ಆತನ ಮೂಲವನ್ನು ರಿವೀಲ್ ಮಾಡಿತ್ತು.
ನಿನ್ನೆ ಮಧ್ಯಾಹ್ನವೇ ಮಂಗಳೂರಿನ ಸಕ್ರಮ ಪ್ರಾಧಿಕಾರಕ್ಕೆ (Competent Authority) ಮನವಿ ಸಲ್ಲಿಸಿದ ಎಸ್‌ಐಟಿ, ಚಿನ್ನಯ್ಯನಿಗೆ ನೀಡಲಾಗಿದ್ದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ (Witness Protection Scheme) ಭದ್ರತೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿತ್ತು. ಎಸ್‌ಐಟಿ ಸಲ್ಲಿಸಿದ ಮನವಿಯಲ್ಲಿ ಕೆಲವು ಮಹತ್ವದ ಸಾಕ್ಷ್ಯಗಳನ್ನು ನೀಡಲಾಗಿತ್ತು, ಇದು ಚಿನ್ನಯ್ಯ ನೀಡಿದ ಹೇಳಿಕೆಗಳು ಸುಳ್ಳು ಎಂದು ಸಾಬೀತುಪಡಿಸಿದವು. ಈ ಸಾಕ್ಷ್ಯಗಳ ಆಧಾರದ ಮೇಲೆ, ಸಕ್ರಮ ಪ್ರಾಧಿಕಾರವು ಆತನ ಸಾಕ್ಷಿ ಸಂರಕ್ಷಣೆಯನ್ನು ರದ್ದುಗೊಳಿಸಿದೆ. ಈ ಕ್ರಮದ ಬೆನ್ನಲ್ಲೇ, ಎಸ್‌ಐಟಿ ಆತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದೆ. ಆರಂಭದಲ್ಲಿ ಸಾಕ್ಷಿಯಾಗಿದ್ದ ವ್ಯಕ್ತಿ ಈಗ ಆರೋಪಿಯ ಸ್ಥಾನಕ್ಕೆ ಬಂದು ನಿಂತಿದ್ದು, ಇದು ತನಿಖೆಯ ದಿಕ್ಕಿನಲ್ಲಿ ಮಹತ್ವದ ತಿರುವನ್ನು ತಂದಿದೆ.
ತಿಮರೋಡಿಯೂ ಕಸ್ಟಡಿಗೆ ಸಾಧ್ಯತೆ:
ಹಾಗೆಯೇ ಈ ಬುರುಡೆ ಗ್ಯಾಂಗ್‌ನ ಮತ್ತೋರ್ವ ಸದಸ್ಯ ಮಹೇಶ್ ತಿಮ್ಮರೋಡಿಯ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯ್ತು ವಿಚಾರಣೆ ವೇಳೆ ಪೊಲೀಸರು ಆತನನ್ನು ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಈ ವೇಳೆ ನ್ಯಾಯಾಧೀಶರು ಮೊನ್ನೆಯೇ ಏಕೆ ಕಸ್ಟಡಿಗೆ ಕೇಳಲಿಲ್ಲ ಎಂದು ಪ್ರಶ್ನೆ ಮಾಡಿದರು. ವಶಕ್ಕೆ ಬೇಕಿದ್ದರೆ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಈ ಬಗ್ಗೆ 2 ಗಂಟೆಯಲ್ಲಿ ತೀರ್ಮಾನಿಸುವಂತೆ ಕೋರ್ಟ್ ಪೊಲೀಸರಿಗೆ ತಾಕೀತು ಮಾಡಿದೆ. ಹೀಗಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮಹೇಶ್ ತಿಮರೋಡಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
