ಬೆಂಗಳೂರು, (ಮೇ.17): ಲಾಕ್ ಡೌನ್ ಜಾರಿಯಾದ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ ಮಾಲೀಕರು ಸದ್ಯಕ್ಕೆ ಬಸ್ ಸೇವೆಯನ್ನು ಆರಂಭಿಸದಿರಲು ತೀರ್ಮಾನ ಕೈಗೊಂಡಿದ್ದಾರೆ.

ಮುಂದಿನ ನಾಲ್ಕು ತಿಂಗಳು  ಖಾಸಗಿ ಬಸ್​ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಬಸ್​ಗಳ ಒಕ್ಕೂಟ ನಿರ್ಧರಿಸಿದೆ.

ಮೇ 18 ರಿಂದ ಬಿಎಂಟಿಸಿ ಸಂಚಾರ ಸಾಧ್ಯತೆ; ಮೆಡಿಕಲ್ ಸರ್ಟಿಫಿಕೇಟ್‌ಗಾಗಿ ಮುಗಿಬಿದ್ದ ಸಿಬ್ಬಂದಿ!

ಲಾಕ್​ಡೌನ್​ನಿಂದಾಗಿ ಕಳೆದ ಎರಡು ತಿಂಗಳಿಂದ ಬಸ್​ಗಳು ರಸ್ತೆಗೆ ಇಳಿದಿಲ್ಲ. ಇದು ಬಸ್​ ಮಾಲೀಕರಿಗೆ ಭಾರೀ ಹೊರೆ ಆಗಿದೆ. ಹೀಗಾಗಿ ತೆರಿಗೆ ವಿನಾಯಿತಿ ನೀಡುವಂತೆ ಖಾಸಗಿ ಬಸ್​ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಸೆಪ್ಟೆಂಬರ್​ ವರೆಗೆ ಬಸ್​ಗಳನ್ನು ರಸ್ತೆಗೆ ಇಳಿಸುವುದಿಲ್ಲ ಎನ್ನುವ ಎಚ್ಚರಿಕೆ ನೀಡಿದೆ.

ಇದರಿಂದ ಪ್ರಯಾಣಿಕರಿಗೆ ಭಾರೀ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಖಾಸಗಿ ಬಸ್​ ಒಕ್ಕೂಟದ ಜೊತೆ ಸಂಧಾನ ಮಾತುಕತೆ ನಡೆಸಿ ಅದು ಯಶಸ್ವಿಯಾದರೆ, ಬಸ್​ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.