ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆಯು ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು(ಜ.23): ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹೇಳಿದ್ದಾರೆ.
ಸೋಮವಾರ ನಗರದಲ್ಲಿ ರಾಮೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು ಹೆಮ್ಮೆ ಪಡುತ್ತಿದ್ದಾರೆ ಎಂದರು.
ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆಯು ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ ಎಂದರು.
ಐತಿಹಾಸಿಕ ಕ್ಷಣ ವೀಕ್ಷಣೆ ಪುಣ್ಯದ ಫಲ: ಮಾಜಿ ಸಚಿವ ಸೋಮಣ್ಣ
ದೇಶದ ಪ್ರತಿಯೊಂದು ರಾಜ್ಯವನ್ನು ಪ್ರಗತಿಪಥದಲ್ಲಿ ಒಯ್ಯುವ ಹಾಗೂ 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ಮೋದಿ ಅವರು ಸಂಕಲ್ಪ ತೊಟ್ಟಿದ್ದಾರೆ. ಅದು ನನಸಾಗಲಿದೆ. ಮೋದಿ ಅವರ ಕರೆಗೆ ಓಗೊಟ್ಟು ಅಯೋಧ್ಯೆ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮನೆಮನೆಯಲ್ಲೂ ದೀಪ ಹಚ್ಚಿದ ಹಿಂದೂಗಳಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು
