ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರಿನ ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ 17,780 ಕೋಟಿ ರು. ವೆಚ್ಚದಲ್ಲಿ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.   

ಬೆಂಗಳೂರು (ಮೇ.23): ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರಿನ ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ 17,780 ಕೋಟಿ ರು. ವೆಚ್ಚದಲ್ಲಿ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚರ್ಚಿಸಿ ಹೈಬ್ರಿಡ್ ಅಥವಾ ಲೂಪ್ ಯಾವ ಮಾದರಿಯ ಸುರಂಗ ರಸ್ತೆ ನಿರ್ಮಾಣ ಮಾಡಬೇಕು ಎಂಬುದನ್ನು ನಿರ್ಧರಿಸಬೇಕು. ಬಳಿಕ ಗ್ಲೋಬಲ್ ಟೆಂಡರ್ ಆಹ್ವಾನಿಸಬೇಕು ಎಂದು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. 

ಈ ಬಗ್ಗೆ ಸಭೆ ಬಳಿಕ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಗರದಲ್ಲಿ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಗಿದೆ. ಹೆಬ್ಬಾಳದಿಂದ ಎಚ್‌ಎಸ್ ಆರ್ ಬಡಾವಣೆ, ಸಿಲ್ಕ್ ಬೋರ್ಡ್‌ವರೆಗೆ 16.7 ಕಿ. ಮೀ. ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು. ಇದು ದಕ್ಷಿಣ-ಉತ್ತರ ಕಾರಿಡಾರ್ ಯೋಜನೆಯಾಗಿದ್ದು ಮೂರು ಪ್ರವೇಶ ಹಾಗೂ ಮೂರು ನಿರ್ಗಮನ ಪ್ರಸ್ತಾಪಿಸಲಾಗಿದೆ. ಶೀಘ್ರಗತಿಯಲ್ಲಿ ಯೋಜನೆ ಪೂರ್ಣಗೊಳಿಸುವ ಸಲುವಾಗಿ ಟೆಂಡರ್‌ ಪಡೆಯುವವರಿಗೆ 26 ತಿಂಗಳಲ್ಲಿ ಸುರಂಗ ಮಾರ್ಗ ಕೊರೆಯುವುದು ಹಾಗೂ 12 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಷರತ್ತು ವಿಧಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಆರ್ಥಿಕ ಸಮಾನತೆಯನ್ನು ತಂದರೆ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಆರ್ಥಿಕ ಸಮಾನತೆಯನ್ನು ತರಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಚ್.ಡಿ.ಕೋಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ, ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ, 2569ನೇ ಬುದ್ಧ ಪೂರ್ಣಿಮೆ ಭಗವಾನ್ ಬುದ್ಧ ಜಯಂತಿ ಹಾಗೂ ಎಚ್.ಡಿ.ಕೋಟೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ನಟಿ ರನ್ಯಾ ರಾವ್‌ಗೆ ಪರಂ ಟ್ರಸ್ಟ್‌ನಿಂದ 40 ಲಕ್ಷ ಪಾವತಿ: ಡಿ.ಕೆ.ಶಿವಕುಮಾರ್

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ ಎಂದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಆರ್ಥಿಕವಾಗಿ ಸಬಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ 52 ಸಾವಿರ ಕೋಟಿ ಹಾಗೂ 1 ಲಕ್ಷದ 34 ಸಾವಿರ ಕೋಟಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡಲಾಗುತ್ತಿದೆ ಎಂದರು.