ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಸಂಪುಟ ಅಸ್ತು!
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ಹತ್ತರವರೆಗೆ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು (ಜು.23) : ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ಹತ್ತರವರೆಗೆ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲೇ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಸರ್ಕಾರ ನಿರ್ಧರಿಸಿದೆ.
ರಾಮ'ನ ಹೆಸರು ಇರೊದಕ್ಕೇ ರಾಮನಗರ ಹೆಸರು ಬದಲಾವಣೆ? ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಇದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP), ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಎಲೆಕ್ಟ್ರಾನಿಕ್ ಸಿಟಿ, ಬಿಡದಿ, ಆನೇಕಲ್ ಸೇರಿ) ಎರಡೂ ಜಿಲ್ಲೆಗಳ ಪ್ರದೇಶಗಳನ್ನು ಸೇರಿಸಿ ಗ್ರೇಟರ್ ಬೆಂಗಳೂರು(Greater Bangalore) ರಚಿಸಲು ತೀರ್ಮಾನಿಸಲಾಗಿದೆ.
ಇದೇ ವೇಳೆ, ಬಿಬಿಎಂಪಿಯನ್ನು 1 ರಿಂದ 10 ಪಾಲಿಕೆಗಳವರೆಗೂ ವಿಭಜಿಸಬಹುದೆಂದು ಸಮಿತಿಯು ಬಿ.ಎಸ್. ಪಾಟೀಲ್ ಸಮಿತಿ(B.S. Patil Committee) ಶಿಫಾರಸು ಮಾಡಿದ್ದು ಇದಕ್ಕೆ ಸಂಪುಟ ಒಪ್ಪಿದೆ. 400 ವಾರ್ಡ್‌ಗಳೂ ವಿಕೇಂದ್ರೀಕೃತ ಅಧಿಕಾರ ಹೊಂದಿರಲಿವೆ. ವಿಧೇಯಕ ಜಾರಿಗೆ ಬಂದರೆ, ಬಿಬಿಎಂಪಿ-2020 ಕಾಯಿದೆಯು ರದ್ದಾಗಲಿದೆ.
ಸಿಎಂ ಅಧ್ಯಕ್ಷರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(Greater Bangalore Authority)ಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದು, ಬೆಂಗಳೂರು ನಗರ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಹಾಗೆಯೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಲಿದ್ದಾರೆ. ಉಳಿದಂತೆ ಗೃಹ ಸಚಿವ, ನಗರಾಭಿವೃದ್ಧಿ ಸಚಿವ, ಸಾರಿಗೆ ಸಚಿವ, ಇಂಧನ ಸಚಿವ, ಬೃಹತ್ ಬೆಂಗಳೂರು ವ್ಯಾಪ್ತಿಯ ಶಾಸಕರಾಗಿ ಸಚಿವರಾಗಿರುವವರು ಸದಸ್ಯರಾಗಿರಲಿದ್ದಾರೆ.
ಅದೇ ರೀತಿ ಮಹಾನಗರ ಪಾಲಿಕೆಗಳ ಮೇಯರ್‌ಗಳು, ಪ್ರತಿ ಮಹಾನಗರ ಪಾಲಿಕೆಯಿಂದ ನಾಮನಿರ್ದೇಶನಗೊಂಡ ಇಬ್ಬರು, ಬಿಡಿಎ ಆಯುಕ್ತ, ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ಎಂಡಿ, ಬಿಎಂಆರ್‌ಸಿಎಲ್ ಎಂಡಿ, ಬೆಸ್ಕಾಂ ಎಂಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಸಿಇಒ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯ ಎಂಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜನಾಧಿಕಾರಿ, ಪ್ರಧಾನ ಮುಖ್ಯ ಎಂಜಿನಿಯರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶಕರು ಸದಸ್ಯರಾಗಿರಲಿದ್ದಾರೆ.
ಏನ್ ಗ್ರೇಟರ್ ಬೆಂಗಳೂರು ಮಾಡ್ತಾರೋ ಮಾಡಲಿ: ಡಿಕೆಶಿಗೆ ಎಚ್ಡಿಕೆ ಟಾಂಗ್
ನಗರಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆ ಪ್ರಾಧಿಕಾರ ವ್ಯಾಪ್ತಿಗೆ: ಜಿಬಿಎ ಅಡಿಯಲ್ಲಿಯೇ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಮೆಟ್ರೊ, ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ನಗರಕ್ಕೆ ಸಂಬಂಧಿಸಿದ ಎಲ್ಲಇಲಾಖೆಗಳೂ ಕಾರ್ಯ ನಿರ್ವಹಿಸಬೇಕಾಗುತ್ತದೆ.