'ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ; ಘರ್ ವಾಪಸಿ ಬೆನ್ನಲ್ಲೇ ವಿನಯ ಕುಲಕರ್ಣಿ ಅಚ್ಚರಿ ಹೇಳಿಕೆ!

ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆಯಾಗಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅಚ್ಚರಿ ಮೂಡಿಸಿದ್ದಾರೆ.

Cabinet change  after two years says MLA vinaya kulkarni at vijayapur rav

ವಿಜಯಪುರ: (ಆ.19) ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆಯಾಗಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅಚ್ಚರಿ ಮೂಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿರಿಯ ಸಚಿವ ಕೆಎಚ್‌ ಮುನಿಯಪ್ಪವರು ಈ ಕುರಿತು ಹೇಳಿಕೆ ನೀಡಿದ್ದಾರೆ. ಎರಡೂವರೆ ವರ್ಷದ ಬಳಿಕ ಅದೇ ರೀತಿ ಆಗಲಿದೆ. ಮುಂದೆ ನನಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಅವಕಾಶವೂ ಇದೆ ಎಂದರು. 

ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಇಲ್ಲ ; ಮುಂದಿನ ತಿಂಗಳೂ ಉಚಿತ 5 ಕೇಜಿ ಅಕ್ಕಿ ಬದಲು ಹಣ : ಮುನಿಯಪ್ಪ

ಇಡೀ ಟೀಂ ಬದಲಾಗಲಿದೆ, ಬದಲಾಗಬೇಕು ಎಂದು ಕೆಎಚ್‌ ಮುನಿಯಪ್ಪ ಅವರು ಓಪನ್ ಆಗಿ ಹೇಳಿದ್ದಾರೆ.ಅವರು ಹೇಳಿಕೆಯಿಂದ ಖುಷಿಯಾಗಿದೆ. ಟೋಟಲ್ ಟೀಂ ಚೇಂಜ್ ಆಗಬೇಕು ಎಂದರು. ಇದೇ ಸಿಎಂ ಬದಲಾವಣೆಯನ್ನು ಹೈಕಮಾಂಡ್ ಮಾಡುತ್ತೆ ಎನ್ನುವ ಮೂಲಕ ಸಿಎಂ ಹುದ್ದೆ ಬದಲಾಗುವ ಕುರಿತು ಸುಳಿವು ನೀಡಿದರು.

ಅನ್ನಭಾಗ್ಯ ಸಿದ್ದರಾಮಯ್ಯರ ಅಚ್ಚುಮೆಚ್ಚಿನ ಕಾರ್ಯಕ್ರಮ: ಶಾಸಕ ಬಸವರಾಜ ರಾಯರಡ್ಡಿ

ಇತ್ತೀಚೆಗೆ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ, ಪಕ್ಷದ ಅನುಕೂಲಕ್ಕಾಗಿ ಹಿರಿಯ ಸಚಿವರು ಎರಡೂವರೆ ವರ್ಷದ ಬಳಿಕ ಹೊಸಬರಿಗೆ ಸಚಿವ ಸ್ಥಾನ ಬಿಟ್ಟುಕೊಡಬೇಕು. ನಾನು ಎರಡೂವರೆ ವರ್ಷಕ್ಕೆ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಕೆ.ಎಚ್‌. ಮುನಿಯಪ್ಪ ಹೇಳಿದ್ದರು. ಆದರೆ ಮುನಿಯಪ್ಪ ಅವರ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅಸಮ್ಮತಿ ವ್ಯಕ್ತಪಡಿಸಿದ್ದರು. ಇದೀಗ ಕೆಎಚ್‌ ಮುನಿಯಪ್ಪ ಅವರ ಹೇಳಿಕೆಗೆ ಧ್ವನಿಗೂಡಿಸಿರುವ ಶಾಸಕ ವಿನಯ ಕುಲಕರ್ಣಿ. ಈಗಾಗಲೇ ಸಿಎಂ ಬದಲಾವಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ ವಿಚಾರ ಮುಂದಿನ ದಿನಗಳಲ್ಲಿ ಹೇಗೆ ತಿರುವು ಪಡೆದುಕೊಳ್ಳುತ್ತದೋ ಕಾದು ನೋಡಬೇಕು.

Latest Videos
Follow Us:
Download App:
  • android
  • ios