Asianet Suvarna News Asianet Suvarna News

Bengaluru traffic ತಗ್ಗಿಸಲು ಶಾಲೆ, ವಾಣಿಜ್ಯ ಕಂಪನಿಗಳ ಸಮಯ ಬದಲಿಸಬಹುದೇ? ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್‌ ದಟ್ಟಣೆ ತಗ್ಗಿಸಲು ಶಾಲೆ, ವಾಣಿಜ್ಯ ಕೆಲಸದ ಸಮಯ ಬದಲಾವಣೆ ಬಗ್ಗೆ ಮರು ಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

Can school and commercial work hours be changed to ease Bengaluru traffic High Court advice to Govt sat
Author
First Published Sep 12, 2023, 7:45 PM IST | Last Updated Sep 12, 2023, 7:45 PM IST

ಬೆಂಗಳೂರು (ಸೆ.12): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಟ್ರಾಪಿಕ್‌ ಸಮಸ್ಯೆ ಉಂಟಾಗುತ್ತಿದೆ. ಈ ಟ್ರಾಫಿಕ್‌ ದಟ್ಟಣೆ ತಗ್ಗಿಸಲು ಶಾಲಾ ಸಮಯ, ವಾಣಿಜ್ಯ ಕೆಲಸದ ಸಮಯವನ್ನು ಬದಲಾವಣೆ ಮಾಡುವ ಬಗ್ಗೆ ಮರು ಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರವು ಮಧ್ಯಸ್ಥಗಾರರ ಸಭೆಯನ್ನು ಕರೆಯಲು ಮತ್ತು ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ವಾಣಿಜ್ಯ ಮನೆಗಳು ಮತ್ತು ಕಂಪನಿಗಳ ಶಾಲಾ ಸಮಯ ಮತ್ತು ಕೆಲಸದ ಸಮಯವನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರೇತರ ಸಂಸ್ಥೆಯಾದ (ಎನ್‌ಜಿಒ) ಸಮರ್ಪಣ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು ಹೀಗೆ ಹೇಳಿದೆ.

ತಮಿಳುನಾಡಿಗೆ ಮತ್ತೆ 15 ದಿನ ತಲಾ 5 ಸಾವಿರ ಕ್ಯೂಸೆಕ್ಸ್‌ ಕಾವೇರಿ ನೀರು ಹರಿಸಿ: ಸಿಡಬ್ಲ್ಯೂಆರ್‌ಸಿ ಸೂಚನೆ

ಜೊತೆಗೆ, ಕಾರ್ಮಿಕ ಕಾರ್ಯದರ್ಶಿಯು ಕೈಗಾರಿಕೆಗಳು, ಕಾರ್ಖಾನೆಗಳು ಅಥವಾ ಅಲೈಡ್ ಯೂನಿಟ್‌ಗಳು, ಕೈಗಾರಿಕಾ ಸಂಸ್ಥೆ, ಚೇಂಬರ್ ಆಫ್ ಕಾಮರ್ಸ್‌ನ ಪ್ರತಿನಿಧಿಗಳಂತಹ ಮಧ್ಯಸ್ಥಗಾರರ ಸಭೆಯನ್ನು ಕರೆಯಬಹುದು. ಇವುಗಳ ಕೆಲಸದ ಸಮಯವನ್ನು ಮರುಪರಿಶೀಲಿಸುವ ಬಗ್ಗೆ ಚರ್ಚಿಸಬಹುದು. ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ವಾಣಿಜ್ಯ ಮನೆಗಳು, ಕಂಪನಿಗಳು ಇತ್ಯಾದಿಗಳೊಂದಿಗೂ ಈ ಬಗ್ಗೆ ಚರ್ಚೆ ಮಾಡಬಹುದು. ಈ ಮೂಲಕ ಪೀಕ್‌ ಅವರ್‌ಗಳಲ್ಲಿ ಸಂಚಾರ ದಟ್ಟಣೆಯನ್ನು ತಗ್ಗಿಸುವುದಕ್ಕೆ ಅನುಕೂಲ ಆಗಲಿದೆ. ಈ ಪೀಕ್‌ ಅವರ್‌ನಲ್ಲಿ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮಧ್ಯಸ್ಥಗಾರರು ಕೆಲಸದ ಸಮಯದ ಆಚೀಚೆ ಮಾಡಿಕೊಳ್ಳಬಹುದೇ ಎಂಬುದರ ಸಲಹೆಯನ್ನು ಕೂಡ ನೀಡಬಹುದು ಎಂದು ಪೀಠ ಸ್ಪಷ್ಟಪಡಿಸಿದೆ.

ಸಾದಹಳ್ಳಿ ಗೇಟ್‌ನಿಂದ ಹೆಬ್ಬಾಳ ಮೇಲ್ಸೇತುವೆ ನಡುವೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಾರಿ ವಾಹನಗಳ ಪ್ರವೇಶ ನಿಷೇಧಿಸಿ 2014ರಲ್ಲಿ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಅಧಿಸೂಚನೆಯನ್ನು ಉಲ್ಲೇಖಿಸಿದ ನ್ಯಾಯಾಲಯ, "ಬೆಳಗ್ಗೆಯಿಂದ ರಾತ್ರಿವರೆಗೆ ಮಾತ್ರ ಭಾರಿ ವಾಹನಗಳನ್ನು ನಿಷೇಧಿಸದೇ ಇದನ್ನು ಪೂರ್ಣಕಾಲಿಕವಾಗಿ ನಿಷೇಧಿಸಿದಾಗಲೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಬಹುದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಬೆಂಗಳೂರಿನ ಅರ್ಧ ಭಾಗಕ್ಕೆ ನಾಳೆ ನೀರೂ ಇಲ್ಲ, ಕರೆಂಟೂ ಇಲ್ಲ: ನಿಮ್ಮ ಏರಿಯಾ ಇದೆನಾ ನೋಡಿ

ಇನ್ನು ಮೆಟ್ರೊ ರೈಲು ಮಾರ್ಗದ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ. ಕಾಲಮಿತಿಯನ್ನು ವಿಸ್ತರಿಸಿ ಅಂದರೆ 2023-2024 ನೇ ವರ್ಷಕ್ಕೆ ಯೋಜನಾ ವರದಿಯನ್ನು ಸಿದ್ಧಪಡಿಸಬೇಕು. ಜೊತೆಗೆ ಯೋಜನಾ ವರದಿಯನ್ನು ಸಿದ್ಧಪಡಿಸುವ ಕಾರ್ಯವು ಕೂಡ ತ್ವರಿತಗೊಳಿಸಬೇಕು ಎಂದು ಪೀಠವು ಸೂಚಿಸಿದೆ.

Latest Videos
Follow Us:
Download App:
  • android
  • ios