Asianet Suvarna News Asianet Suvarna News

ಸಂಚಾರ ನಿಯಮ ಪಾಲಿಸದ 338 ಶಾಲಾ ವಾಹನ ಚಾಲಕರ ವಿರುದ್ಧ ಕೇಸ್‌!

ನಗರ ಸಂಚಾರ ಪೊಲೀಸರು ಶಾಲಾ ವಾಹನಗಳ ಚಾಲಕರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದಡಿ 338 ಪ್ರಕರಣ ದಾಖಲಿಸಿದ್ದಾರೆ. ನಗರ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 7.30ರಿಂದ 9.30ರ ವರೆಗೆ ಶಾಲಾ ವಾಹನಗಳ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

Case against school bus driver for traffic violation 338 at Bengaluru rav
Author
First Published Feb 22, 2024, 6:38 AM IST

 ಬೆಂಗಳೂರು (ಫೆ.22) : ನಗರ ಸಂಚಾರ ಪೊಲೀಸರು ಶಾಲಾ ವಾಹನಗಳ ಚಾಲಕರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದಡಿ 338 ಪ್ರಕರಣ ದಾಖಲಿಸಿದ್ದಾರೆ.

ನಗರ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 7.30ರಿಂದ 9.30ರ ವರೆಗೆ ಶಾಲಾ ವಾಹನಗಳ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. 2,059 ಶಾಲಾ ವಾಹನಗಳ ತಪಾಸಣೆ ಮಾಡಿದ್ದು, ಈ ವೇಳೆ ಪಾನಮತ್ತರಾಗಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಂತೆಯೇ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುತ್ತಿದ್ದ 331 ಶಾಲಾ ವಾಹನಗಳ ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ, 43 ಚಾಲಕರ ವಿರುದ್ಧ ಕೇಸ್‌

Follow Us:
Download App:
  • android
  • ios