ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸುವ ಫೇಸ್‌ಬುಕ್ ಪೋಸ್ಟ್‌ ಹಾಕಿದ ಆರೋಪದ ಮೇಲೆ ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. 

ಶಿವಮೊಗ್ಗ (ಮೇ.24): ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸುವ ಫೇಸ್‌ಬುಕ್ ಪೋಸ್ಟ್‌ನಿಂದಾಗಿ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಆರೋಪಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್‌ಎಂಎಲ್ ನಗರದ ಮುಜಮ್ಮಿಲ್ ಅಲಿಯಾಸ್ ಮುಜ್ (38) ಎಂಬಾತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮೇ 8, 2025ರಂದು ಆರೋಪಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ಕೈಗೆ ಕೋಳ ತೊಡಿಸಿದ ಮತ್ತು ಅಡಿಯಾಲಾ ಜೈಲಿನ ಮುಂಭಾಗದಲ್ಲಿ ಇಬ್ಬರು ಸಮವಸ್ತ್ರಧಾರಿಗಳ ನಡುವೆ ನಿಲ್ಲಿಸಿರುವ ಚಿತ್ರವನ್ನು ಉದ್ದೇಶಪೂರ್ವಕವಾಗಿ ಪೋಸ್ಟ್ ಮಾಡಿದ್ದಾನೆ.

ಈ ಪೋಸ್ಟ್ ರಾಷ್ಟ್ರದ ವಿರುದ್ಧ ಮತ್ತು ದೇಶದ ಜನರ ಭಾವನೆಗಳನ್ನು ಕೆರಳಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಲಾಗಿದೆ. ಸದ್ಯ ದೊಡ್ಡಪೇಟೆ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿ, ತನಿಖೆ ಆರಂಭವಾಗಿದೆ.