ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಿದರೆ ಕೇಸ್‌: ಸಿಎಂ ಸಿದ್ದರಾಮಯ್ಯ

ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಹಚ್ಚಬಹುದು. ರಾತ್ರಿ 10 ಗಂಟೆ ಮೇಲೆ ಪಟಾಕಿ ಮಾರಾಟ ಹಾಗೂ ಬಳಕೆ ನಿಷಿದ್ದ. ಈ ಬಗ್ಗೆ ಪೊಲೀಸರು ಎಚ್ಚರ ವಹಿಸಬೇಕು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ 

case if firecrackers other than green firecrackers are sold in Karnataka Says CM Siddaramaiah grg

ಬೆಂಗಳೂರು(ಅ.27):  ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆ ರಾಜ್ಯದಲ್ಲಿ ಹಸಿರುಪಟಾಕಿಮಾತ್ರ ಮಾರಾಟಮಾಡಬೇಕು. ಈ ನಿಯಮ ಉಲ್ಲಂಘಿಸಿದವರ ವಿರುದ್ದ ಕ್ರಿಮಿ ನಲ್‌ ಪ್ರಕರಣ ದಾಖಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಗೃಹ ಕಚೇರಿ ಕೃಷ್ಣಾ ದಲ್ಲಿ ಶನಿವಾರ ಸಂಜೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ರಾಸಾಯನಿಕ ಪಟಾಕಿ ಮಾರಾಟ ಹಾಗೂ ಬಳಕೆ ನಿಷಿದ್ದ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು ಪಟಾಕಿ ದಾಸ್ತಾನು ಮಳಿಗೆಗಳನ್ನು ಪರಿಶೀಲಿಸಬೇಕು. ಹಸಿರು ಪಟಾಕಿ ಹೊರತಾಗಿ ಬೇರೆ ಹಾನಿಕಾರಕ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೆ ಮಾರಾಟ ಮಾಡುತ್ತಿದ್ದರೆ ಅಥವಾ ಸೂಕ್ತವಲ್ಲದ ಸ್ಥಳದಲ್ಲಿ ನಿಯಮ ಬಾಹಿರವಾಗಿ ದಾಸ್ತಾನು ಮಾಡಿದ್ದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ. 

ರೈಲಿನಲ್ಲಿ ಪಟಾಕಿ ಸಾಗಿಸುವಂತಿಲ್ಲ, ಇದಕ್ಕೆ ಶಿಕ್ಷೆ ಎಷ್ಟು ಗೊತ್ತಾ?

ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಹಚ್ಚಬಹುದು. ರಾತ್ರಿ 10 ಗಂಟೆ ಮೇಲೆ ಪಟಾಕಿ ಮಾರಾಟ ಹಾಗೂ ಬಳಕೆ ನಿಷಿದ್ದ. ಈ ಬಗ್ಗೆ ಪೊಲೀಸರು ಎಚ್ಚರ ವಹಿಸಬೇಕು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಸೂಚಿಸಿದರು.

Latest Videos
Follow Us:
Download App:
  • android
  • ios