ಬೆಂಗಳೂರು: ಸೋಲಾರ್ ಬಳಸಿದ್ರೆ 1 ಲಕ್ಷ ರೂ. ಬಹುಮಾನ..!
ಜನವರಿ ಅಂತ್ಯದ ವೇಳೆಗೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಮತ್ತು ಬೀದಿ ದೀಪಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸಿಕೊಳ್ಳುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಲಕ್ಷ ರು. ಪ್ರೋತ್ಸಾಹ ಧನ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಘೋಷಿಸಿದ್ದಾರೆ.
ಬೆಂಗಳೂರು(ನ.03): ಬರುವ ಜನವರಿ ಅಂತ್ಯದ ವೇಳೆಗೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಮತ್ತು ಬೀದಿ ದೀಪಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸಿಕೊಳ್ಳುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಲಕ್ಷ ರು. ಪ್ರೋತ್ಸಾಹ ಧನ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಘೋಷಿಸಿದ್ದಾರೆ.
ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ (ಜಿಕೆವಿಕೆ) ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಇಲಾಖೆ ಆಯೋಜಿಸಿದ್ದ ‘ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಅವರು ಮಾತನಾಡಿದ್ದಾರೆ.
3 ಬಂಗುಡೆಗೆ ನೂರು ರೂ.; ಚಂಡಮಾರುತದ ಎಫೆಕ್ಟ್‌ಗೆ ಮೀನು ದುಬಾರಿ..!
ರಾಜ್ಯದ ಕೆಲವು ಗ್ರಾಮ ಪಂಚಾಯತ್‌ಗಳು ಕಚೇರಿ ಮತ್ತು ಬೀದಿ ದೀಪಗಳಿಗೆ ಸೌರ ವಿದ್ಯುತ್ ಅಳವಡಿಸಿಕೊಂಡು ವಾರ್ಷಿಕ ಲಕ್ಷಾಂತರ ರು.ಗಳ ವಿದ್ಯುತ್ ಬಿಲ್ ಉಳಿಸುತ್ತಿವೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯತ್‌ಗಳು ಸೌರ ವಿದ್ಯುತ್ ಸೌಲಭ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಇಲಾಖೆ ಅಗತ್ಯ ಸಹಕಾರ ನೀಡಲಿದೆ. ಜೊತೆಗೆ ಸ್ಥಳೀಯ ಶಾಸಕರಿಗೆ ಸಹಕರಿಸುವಂತೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಫೋನ್ ಕದ್ದಾಲಿಕೆ: 54 ಇನ್ಸ್‌ಪೆಕ್ಸರ್‌ಗಳಿಗೆ CBI ನೊಟೀಸ್.