Asianet Suvarna News Asianet Suvarna News

ಜಾತಿ ಗಣತಿ ವರದಿ ಅ.18ರಂದು ಸಂಪುಟದಲ್ಲಿ ಮಂಡನೆ: ಸಿಎಂ ಸಿದ್ದರಾಮಯ್ಯ

ಇದು ಬರೀ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. ಕೋಟಿ ಕನ್ನಡಿಗರ ಸಮೀಕ್ಷೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ ನಡೆದಿದೆ. ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಚರ್ಚಿಸುತ್ತೇವೆ. ವರದಿಗೆ ವಿರೋಧ ಮಾಡುವ ಪ್ರಶ್ನೆಯಿಲ್ಲ. ಎಲ್ಲರ ಅಭಿಪ್ರಾಯಗಳನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ' ಎಂದು ಸಷ್ಟಪಡಿಸಿದ ಸಿದ್ದರಾಮಯ್ಯ 

caste census report will be presented in the Cabinet on october 18th Says CM Siddaramaiah grg
Author
First Published Oct 8, 2024, 5:00 AM IST | Last Updated Oct 8, 2024, 5:00 AM IST

ಬೆಂಗಳೂರು(ಅ.08):  ಮಹತ್ವದ ವಿದ್ಯಮಾನವೊಂದರಲ್ಲಿ, 'ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ' (ಜಾತಿ ಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದಾಗಿ ಬಹುಚರ್ಚಿತ ಜಾತಿಗಣತಿ ವರದಿ ಮಂಡನೆ ವಿಚಾರವು ಕುತೂಹಲಕಾರಿ ಘಟ್ಟ ತಲುಪಿದೆ.

ಸೋಮವಾರ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿ ಹಿಂದುಳಿದ ವರ್ಗಗಳ 30 ಮಂದಿ ಸಚಿವರು ಹಾಗೂ ಶಾಸಕರು ಜಾತಿಗಣತಿ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, 'ಇದು ಬರೀ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. ಕೋಟಿ ಕನ್ನಡಿಗರ ಸಮೀಕ್ಷೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ ನಡೆದಿದೆ. ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಚರ್ಚಿಸುತ್ತೇವೆ. ವರದಿಗೆ ವಿರೋಧ ಮಾಡುವ ಪ್ರಶ್ನೆಯಿಲ್ಲ. ಎಲ್ಲರ ಅಭಿಪ್ರಾಯಗಳನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ' ಎಂದು ಸಷ್ಟಪಡಿಸಿದರು. 

News Hour: ಮುಡಾ ಮರೆಸೋಕೆ ಜಾತಿಗಣತಿ?

'ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾ ರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ ಸಮೀಕ್ಷೆ ವರದಿಯನ್ನು ಅಂಗೀ ಕಾರಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ.

ವರದಿ 7 ಕೋಟಿ ಕನ್ನಡಿಗರ ಸಮೀಕ್ಷೆ : 

ಇದು ಬರೀ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. 7 ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ ನಡೆದಿದೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ವಿಸ್ತ್ರತವಾಗಿ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಜಾತಿಗಣತಿ ವರದಿ ಅವೈಜ್ಞಾನಿಕ ಎಂಬುದು ತಪ್ಪು: ಕಾಂತರಾಜು

ಬೆಂಗಳೂರು 'ಜಾತಿಗಣತಿ ವರದಿ ಅವೈಜ್ಞಾನಿಕ ಎಂಬುದು ತಪ್ಪು. ಸುಪ್ರೀಂಕೋರ್ಟ್ ಮಾನದಂಡ ಅನುಸರಿಸಿಯೇ ಸಮೀಕ್ಷೆ ನಡೆಸಲಾಗಿದೆ' ಎಂದು ಈ ವರದಿ ನೀಡಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜು ಹೇಳಿದ್ದಾರೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Latest Videos
Follow Us:
Download App:
  • android
  • ios