Asianet Suvarna News Asianet Suvarna News

ಬೆಂಗಳೂರು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

ತಮಿಳನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ವಿರೋಧಿಸಿ ರೈತರು, ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ. ನಾಳೆ ಸೆಪ್ಟೆಂಬರ್  26 ರಂದು  ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಈ ವೇಳೆ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

Cauvery dispute bengaluru bandh issue Bengaluru DC orders to declare holiday for schools and colleges tomorrow rav
Author
First Published Sep 25, 2023, 11:42 PM IST

ಬೆಂಗಳೂರು (ಸೆ.25) ತಮಿಳನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ವಿರೋಧಿಸಿ ರೈತರು, ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ. ನಾಳೆ ಸೆಪ್ಟೆಂಬರ್  26 ರಂದು  ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಈ ವೇಳೆ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ

ಕಾವೇರಿ ವಿವಾದ: ಸೆ.26ರಂದು ಬೆಂಗಳೂರು ಬಂದ್‌, ಸೆ.29ರಂದು ಅಖಂಡ ಕರ್ನಾಟಕ ಬಂದ್? ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿವಿಧ ಕನ್ನಡ ಪರ ಸಂಘಟನೆಗಳು ಬಂದ್‌ ಘೋಷಣೆ ಮಾಡಿವೆ. ಪೊಲೀಸ್‌ ಆಯುಕ್ತರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲೆ ಹೊರಡಲು ವಾಪಾಸಾಗಲು ಅನಾನುಕೂಲ ಆಗಬಹುದು ಆದ್ದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Follow Us:
Download App:
  • android
  • ios