ಕಾವೇರಿ ಜಲವಿವಾದ: ಎರಡೂ ಬಂದ್‌ಗೆ ನಮ್ಮ ಬೆಂಬಲವಿಲ್ಲ- ಕರವೇ ನಾರಾಯಣಗೌಡ
ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಂಗಳವಾರದ ‘ಬೆಂಗಳೂರು ಬಂದ್’ ಹಾಗೂ ಶುಕ್ರವಾರದ ‘ಕರ್ನಾಟಕ ಬಂದ್’ಗೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.
ಬೆಂಗಳೂರು (ಸೆ.26): ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಂಗಳವಾರದ ‘ಬೆಂಗಳೂರು ಬಂದ್’ ಹಾಗೂ ಶುಕ್ರವಾರದ ‘ಕರ್ನಾಟಕ ಬಂದ್’ಗೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.
ನಮ್ಮ ಸಂಘಟನೆ ಕಾರ್ಯಕರ್ತರು ಮಂಗಳವಾರ ಪ್ರತ್ಯೇಕವಾಗಿ ಗಾಂಧಿನಗರ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಬೆಂಗಳೂರು ಬಂದ್: ಮಧ್ಯರಾತ್ರಿಯಿಂದಲೇ ನಗರದಲ್ಲಿ ಸೆಕ್ಷನ್ 144 ಜಾರಿ!
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ರಾಜ್ಯಾದ್ಯಂತ ಮುಂದುವರೆಯುತ್ತದೆ. ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಂಗಳವಾರ ಹಾಗೂ ಸೆ.29ಕ್ಕೆ ಹಲವು ಸಂಘಟನೆಗಳು ಕರೆ ನೀಡಿರುವ ಬೆಂಗಳೂರು, ಕರ್ನಾಟಕ ಬಂದ್‌ಗೆ ಕರವೇ ಬೆಂಬಲಿಸುವುದಿಲ್ಲ ಎಂದರು.
ಎರಡೂ ದಿನಗಳ ಬಂದ್ ಹೋರಾಟದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಳ್ಳುವುದಿಲ್ಲ. ಆದರೆ, ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದೆ ಎಂದು ಹೇಳಿದರು.
ಬೆಂಗಳೂರು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ