Asianet Suvarna News Asianet Suvarna News

Mandya news: ತಮಿಳನಾಡಿಗೆ ಕಾವೇರಿ ನೀರು : ಮಂಡ್ಯದಲ್ಲಿಂದು ಸುಮಲತಾ, ಬಿಜೆಪಿ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಮಂಡ್ಯದ ಸಂಜಯ್‌ ವೃತ್ತದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು.

Cauvery river water issue MP sumalata ambarish protest with BJP agains congress government at mandya today rav
Author
First Published Aug 21, 2023, 10:05 AM IST

ಮಂಡ್ಯ (ಆ.21) :  ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಮಂಡ್ಯದ ಸಂಜಯ್‌ ವೃತ್ತದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು.

ಸಂಸದೆ ಸುಮಲತಾ(Sumalata ambarish MP) ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಪ್ರತಿಭಟನೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಇದಕ್ಕೂ ಮುಂಚೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಲು ತೀರ್ಮಾನಿಸಲಾಗಿತ್ತು. ಆದರೆ, ಹೆದ್ದಾರಿ ತಡೆಗೆ ಸಿಗದ ಅನುಮತಿ ಮತ್ತು ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಆಕ್ಷೇಪದ ಹಿನ್ನೆಲೆಯಲ್ಲಿ ಹೆದ್ದಾರಿ ತಡೆ ಕೈಬಿಟ್ಟು, ಮಂಡ್ಯದ ಸಂಜಯ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. 

ಕಾ​ವೇರಿ ನೀ​ರಿನ ವಿ​ಚಾ​ರ​ದಲ್ಲಿ ರಾ​ಜ​ಕೀಯ ತೀಟೆ ಮಾ​ಡ​ಬೇ​ಡಿ: ಸ​ಚಿವ ಚ​ಲು​ವ​ರಾ​ಯ​ಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಆದೇಶ ಇಲ್ಲದಿದ್ದರೂ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡುವ ಮೂಲಕ ರೈತರಿಗೆ ದ್ರೋಹ ಮಾಡಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಜಲಾಶಯಗಳಲ್ಲೂ ನೀರು ಕಡಿಮೆಯಾಗಿದೆ. ಆದರೂ ಏಕಾಏಕಿ ತೀರ್ಮಾನ ಕೈಗೊಂಡು ನೀರು ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಜಲಾಶಯಗಳಲ್ಲಿ ಸಾಕಷ್ಟುಪ್ರಮಾಣದ ನೀರು ಲಭ್ಯವಿದೆ. ಅಷ್ಟೇ ಅಲ್ಲದೆ, ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಚ್‌ನ ಅಂತಿಮ ತೀರ್ಪಿನಲ್ಲಿ ಕುರುವೈ ಬೆಳೆ ಪ್ರದೇಶ 1.80 ಲ​ಕ್ಷ ಹೆಕ್ಟೇರ್‌ ಮೀರಬಾರದು ಎಂದು ಹೇಳಿದೆ. ಆದರೆ, ತಮಿಳುನಾಡಿನಲ್ಲಿ 3 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕುರುವೈ ಬೆಳೆ ಬೆಳೆಯಲಾಗಿದ್ದು, ಅಲ್ಲಿನ ರೈತರ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡಿರುವುದರಿಂದ ಹಿತಾಸಕ್ತಿ ಅಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಕೃಷಿ ಸಚಿವರ ಲಂಚ ಬೇಡಿಕೆ ಪ್ರಕರಣಕ್ಕೆ ಟ್ವಿಸ್ಟ್‌ ಕೊಟ್ಟ ಸಿಐಡಿ: ಮಂಡ್ಯ ಮಾತ್ರವಲ್ಲ, ಮೈಸೂರಿನವರ ಕೈವಾಡವೂ ಇದೆ

ಸ್ಟಾ​ಲಿನ್‌ ಜೊತೆ ಒಳಒ​ಪ್ಪಂದ:

ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ಭಾಗವಹಿಸಿದ್ದು, ಅವರ ಓಲೈಕೆಗಾಗಿ ಮತ್ತು ಡಿ.ಕೆ.ಶಿವಕುಮಾರ್‌ ಹಾಗೂ ಸ್ಟಾಲಿನ್‌ ನಡುವೆ ಆಗಿರುವ ಒಳಒಪ್ಪಂದದಂತೆ ನೀರು ಬಿಡಲಾಗಿದೆ ಎಂದು ದೂರಿದರು.

Follow Us:
Download App:
  • android
  • ios