Asianet Suvarna News Asianet Suvarna News

ಕರ್ನಾಟಕಕ್ಕೆ ಮತ್ತೆ ಅನ್ಯಾಯ, ತಮಿಳುನಾಡಿಗೆ 2700 ಕ್ಯೂಸೆಕ್ ನೀರು ಬಿಡಲು ಆದೇಶ

ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ.

Cauvery water dispute Karnataka and  tamil nadu attend  CWRC meeting gow
Author
First Published Nov 23, 2023, 1:11 PM IST

ನವದೆಹಲಿ (ನ.23): ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ. ಡಿಸೆಂಬರ್ ಅಂತ್ಯದವರೆಗೂ ನೀರು ಬಿಡಲು ಹೇಳಿದ್ದು. ಬಾಕಿ ಇರುವ 7.5ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಂತೆ  ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಗುರುವಾರ ಬೆಳಗ್ಗೆ 11.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುವಂತೆ ಕರ್ನಾಟಕಕ್ಕೆ ಶಿಫಾರಸ್ಸು ಮಾಡಲಾಗಿದೆ. ಸಭೆಯಲ್ಲಿ ಹಳೇ ಬಾಕಿ ನೀರು ಬಿಡಲು ತಮಿಳುನಾಡು ಆಗ್ರಹಿಸಿತು. ಹಳೇ ಬಾಕಿ 11 tmc  ನೀರು ಬಿಡಲು ಬಾಕಿ ಇದೆ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.

ರಾಜ್ಯದಲ್ಲಿ ಬರಗಾಲ, ಕಾವೇರಿ ಸಮಸ್ಯೆಯ ಬಗ್ಗೆ ಗಮನ ಹರಿಸುವುದು ಸೂಕ್ತ: ಸಚಿವ ಚಲುವರಾಯಸ್ವಾಮಿ

ಸದ್ಯ ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅದನ್ನು ಶೇಖರಣೆ ಮಾಡುವ ಬಗ್ಗೆ ತಮಿಳುನಾಡು ಸರಕಾರ ಯಾವುದೇ ಚಿಂತನೆ ನಡೆಸುತ್ತಿಲ್ಲ. ತಮಿಳುನಾಡಿನಲ್ಲಿ ಮಳೆ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅನಿಯಂತ್ರಿತ ನೀರು ನದಿ ಪಾತ್ರ ಸೇರುತ್ತಿದೆ.  3000 ಸಾವಿರ ಕ್ಯೂಸೆಕ್ ಅನಿಯಂತ್ರಿತ ನೀರು ಯಾವುದೇ ಅಡೆತಡೆ ಇಲ್ಲದೇ ತಮಿಳುನಾಡು ಸೇರುತ್ತಿದೆ. ತಮಿಳುನಾಡಿನಲ್ಲಿ ಮಳೆ ಹೆಚ್ಚಾದ್ರೆ ಪುನಃ ನೀರು ಕರ್ನಾಟಕ ಪಡೆಯಲು ಸಾಧ್ಯ ಇಲ್ಲ. ಅಲ್ಲದೇ ಮೆಟ್ಟೂರು ಜಲಾಶಯದಿಂದ ತಮಿಳುನಾಡು ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಬಿಡುತ್ತಿದೆ. ಹಾಗಾಗಿ ಕರ್ನಾಟಕ ದಿಂದ ಪುನಃ ನೀರು ಬಿಡಲು ಸಾಧ್ಯ ಇಲ್ಲ ಎಂಬುದು ಕರ್ನಾಟಕದ ವಾದವಾಗಿದೆ.

ಕರ್ನಾಟಕಕ್ಕೆ ಮತ್ತೊಮ್ಮೆ ಕಾವೇರಿ ಸಂಕಷ್ಟ, ನ.23ರವರೆಗೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದೆ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಸೂಚನೆಯಂತೆ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಮಧ್ಯೆ, ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ, ಕರ್ನಾಟಕದಿಂದ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಲು ರಾಜ್ಯದ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ಮಧ್ಯೆ, ಎಂದಿನಂತೆ ತಮಿಳುನಾಡು, ಬಾಕಿ ನೀರು ಬಿಡುಗಡೆಗೆ ಆದೇಶ ನೀಡುವಂತೆ ಕೋರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios