ಕಾವೇರಿ ಜಲ ವಿವಾದ: ಇಂದು ವಾಟಾಳ್ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಅ.17 ರಂದು ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ ಎಂದು ವಾಟಾಳ್‌ ನಾಗರಾಜ್ ಹೇಳಿದರು.

Cauvery water dispute: Vidhana Soudha siege led by Watal today rav

ಬೆಂಗಳೂರು (ಅ.17):  ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಅ.17 ರಂದು ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ ಎಂದು ವಾಟಾಳ್‌ ನಾಗರಾಜ್ ಹೇಳಿದರು.

ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಕಾರ್ಯಕರ್ತರು ಸೋಮವಾರ ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಕಪ್ಪು ಬಾವುಟ ಪ್ರದರ್ಶನದ ವೇಳೆ ಮಾತನಾಡಿದ ಅವರು, ಮಂಗಳವಾರ ಮಧ್ಯಾಹ್ನ ದೇವರಾಜ ಅರಸು ಪ್ರತಿಮೆಯಿಂದ ಹೊರಟು ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಅವರು ಹೇಳಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಸಮಿತಿಗಳು ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡಿವೆ. ಕೇಂದ್ರ ಸರ್ಕಾರ ನಮ್ಮನ್ನು ಕಡೆಗಣಿಸಿದೆ. ರಾಜ್ಯದ ಲೋಕಸಭಾ ಸದಸ್ಯರು ರೈತರ ಪರವಾಗಿ ಧ್ವನಿ ಎತ್ತದೆ ಕೈಕಟ್ಟಿ ಕುಳಿತಿದ್ದಾರೆ. ಕರ್ನಾಟಕಕ್ಕೆ, ಕನ್ನಡಿಗರಿಗೆ ಯಾರಿಂದಲೂ ರಕ್ಷಣೆ ಇಲ್ಲದಂತಾಗಿದ್ದು, ಕನ್ನಡಪರ ಸಂಘಟನೆಗಳು ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ನಿರ್ಲಕ್ಷಿಸಲಾಗುತ್ತಿದೆ ಎಂದು ಟೀಕಿಸಿದರು.

ಕಾವೇರಿ ಜಲ ವಿವಾದ: ನಾಳೆ ದಿಲ್ಲಿಯಲ್ಲಿ ಕರವೇ ಬೃಹತ್ ಹೋರಾಟ: ನಾರಾಯಣಗೌಡ

Latest Videos
Follow Us:
Download App:
  • android
  • ios