ಫೆ.10ರಿಂದ ನಡೆಯುವ ಏರೋ ಇಂಡಿಯಾ 2025ಕ್ಕೆ ಕಾವೇರಿ ನೀರು ಸರಬರಾಜು ಖಚಿತ

ಫೆಬ್ರವರಿ 10 ರಿಂದ 14 ರವರೆಗೆ ಯಲಹಂಕದಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಕಾವೇರಿ ನೀರು ಪೂರೈಸಲು ಬಿಡಬ್ಲ್ಯೂಎಸ್ಎಸ್ಬಿ ಸಜ್ಜಾಗಿದೆ. ಕೆಆರ್ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಿರುವ ಹಿನ್ನೆಲೆಯಲ್ಲಿ ಪ್ರತಿದಿನ 4 ರಿಂದ 5 ಎಂಎಲ್ಡಿ ನೀರು ಪೂರೈಸಲು ವ್ಯವಸ್ಥೆ ಮಾಡಲಾಗಿದೆ.

Cauvery water supply assured for Bengaluru Aero India 2025 to be held from Feb 10 sat

ಬೆಂಗಳೂರು (ಜ.10): ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಜಾಗತಿಕ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ವ್ಯಾಪಕ ಸಿದ್ಧತೆ ನಡೆಸಲಾಗುತ್ತಿದೆ. ಆದರೆ, ಕಳೆದ ವರ್ಷ ತೀವ್ರ ಬರಗಾಲವಿದ್ದ ಹಿನ್ನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಶೋಗೆ ಕಾವೇರಿ ನೀರು ಪೂರೈಕೆ ಮಾಡಲಾಗಿರಲಿಲ್ಲ. ಆದರೆ, ಈ ವರ್ಷ ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಿರುವ ಕಾರಣ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ-2025ಕ್ಕೆ ಅಗತ್ಯವಾಗಿರುವ ನೀರನ್ನು ಸರಬರಾಜು ಮಾಡಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು , ನೀರು ಪೂರೈಕೆಗಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದೇವೆ. 'ವೈಮಾನಿಕ ಪ್ರದರ್ಶನಕ್ಕೆ ಪ್ರತಿದಿನ 4 ಎಂ.ಎಲ್.ಡಿಯಿಂದ 5 ಎಂ.ಎಲ್.ಡಿ ಕಾವೇರಿ ನೀರು ಅಗತ್ಯವಿದೆ. ನಾವು ವಿಶೇಷ ಪೈಪ್‌ಲೈನ್ ಮೂಲಕ 25 ಎಂ.ಎಲ್.ಡಿ ನೀರು ಪೂರೈಸುವ ಸ್ಥಿತಿಯಲ್ಲಿದ್ದೇವೆ ಎಂದರು.

ಮುಂದುವರೆದು ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ನಾಲ್ಕು ದಿನಗಳ ಕಾಲ ನಿರಂತರ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಡಚಣೆಗಳು ಉಂಟಾದರೆ, ಬಿಡಬ್ಲ್ಯುಎಸ್ಎಸ್‌ಬಿ ತನ್ನ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಸಹ ವ್ಯವಸ್ಥೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗ್ಳೂರು ಏರ್‌ಶೋ ಇನ್ನೊಂದೇ ತಿಂಗಳು: ಭರದ ಸಿದ್ಧತೆ

ಇನ್ನು ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ ಮತ್ತು ಲೋಕೋಪಯೋಗಿ ಇಲಾಖೆಗಳಿಗೆ ವೈಮಾನಿಕ ಪ್ರದರ್ಶನ ನಡೆಯುವ ಯಲಹಂಕದವರೆಗೆ ಹೋಗಲು ಇರುವ ರಸ್ತೆಗಳನ್ನು ದುರಸ್ತಿ ಮಾಡಲು ಸರ್ಕಾರದಿಂದ ಸೂಚನೆ ನೀಡಲಾಗಿದೆ. ಜೊತೆಗೆ, ಅಗತ್ಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಲು ಮುಂದಾಗಿವೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ನೀರಿನ ಪೂರೈಕೆಯ ಅಗತ್ಯವಿರುವ ವಿವಿಧ ಮಳಿಗೆಗಳು ಮತ್ತು ಚಟುವಟಿಕೆಗಳನ್ನು ಒಳಗೊಂಡಿದೆ. ಬೇಡಿಕೆಯನ್ನು ಪೂರೈಸಲು ಬಿಡಬ್ಲ್ಯೂಎಸ್ಎಸ್‌ಬಿ ಸಜ್ಜಾಗಿದೆ ಎಂದು ಹೇಳಿದರು.

ಇನ್ನು ಬೆಂಗಳೂರಿಗೆ ನೀರು ಪೂರೈಕೆ ಮಾಡುವ ಮೂಲವಾದ ಕಾವೇರಿ ಜಲಾಶಯಗಳು ಈ ವರ್ಷ ಭರ್ತಿಯಾಗಿದ್ದು, ಅಗತ್ಯ ಪ್ರಮಾಣದಲ್ಲಿ ನೀರು ಸಂಗ್ರಹವಿದೆ. ಒಂದು ವೇಳೆ ಪೂರೈಕೆಯಲ್ಲಿ ವ್ಯತ್ಯವಾದರೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದರು.

Latest Videos
Follow Us:
Download App:
  • android
  • ios