ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಕೇಸ್ ಇದೀಗ ಅವರಿಗೆ ಉಲ್ಟಾ ಹೊಡೆದಿದೆ. ಜಾರಕಿಹೊಳಿ ವಿರುದ್ದವೇ ಇದೀಗ ಕೇಸ್ ದಾಖಲು ಮಾಡಲಾಗಿದೆ. 

ಬೆಂಗಳೂರು (ಮಾ.26): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಇತ್ತ ಸೀಡಿ ಲೇಡಿ ಮತ್ತೆ ಪ್ರತ್ಯಕ್ಷವಾಗಿ ರಕ್ಷಣೆ ನೀಡಬೇಕೆಂದು ಕೋರಿದ್ದಾಳೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೀಗ ರಮೇಶ್ ಜಾರಕಿಹೊಳಿ ಅವರ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. 

ಗೀತಾ ಮಿಶ್ರಾ ಎನ್ನುವವರು ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. 

ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ : ಈಗ ಲೇಡಿಯ ಮತ್ತೊಂದು ವಿಡಿಯೋ ರಿಲೀಸ್

ಜನಪ್ರತಿನಿಧಿಯಾಗಿ ಕೆಲಸ ಕೊಡಿಸುವುದಾಗಿ ನಂಬಿಸಿ ಓರ್ವ ಹೆಣ್ಣು ಮಗಳಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಂಚನೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಬಂದ ವಿಡಿಯೋವನ್ನು ಗಮನಿಸಿದ್ದು ಯುವತಿಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾರೆ. ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಲಿ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.