ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಪೊಷಣ್‌ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟ ಕಾರ್ಯಕರ್ತಯರು ಬಳೆ ತೊಡುವುದನ್ನು ನಿಷೇಧಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜು.17):  ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ ಎನ್ನುವುದು ಸುಳ್ಳು. ವಾಸ್ತವವಾಗಿ ಇದು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಪೊಷಣ್‌ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟ ಕಾರ್ಯಕರ್ತಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಪುತ್ರ ರಾಕೇಶ್ ಸಿನಿಮಾದಲ್ಲಿ ನಟಿಸಿದ್ರಾ? 7ನೇ ವರ್ಷದ ತಿಥಿಗೆ ಮೂವಿ ರಿಲೀಸ್?

ಬಿಸಿಯೂಟ ತಯಾರಿಕೆ ಸಂಬಂಧ ಮಾರ್ಗಸೂಚಿ ಪ್ರಕಟಿಸಿದ್ದ ಕೇಂದ್ರ ಸರ್ಕಾರ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಿಸಿಯೂಟ ತಯಾರಿಸುವ ಸಮಯದಲ್ಲಿ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಎಂದು ಸೂಚಿಸಿದೆ. ಇದನ್ನು ರಾಜ್ಯ ಶಿಕ್ಷಣ ಇಲಾಖೆ ಯಥಾವತ್ತಾಗಿ ಪ್ರಕಟಿಸಿತ್ತು. ಇದಕ್ಕೆ ಕೆಲ ಹಿಂದೂಪರ ಸಂಘಟನೆಗಳು ಹಾಗು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು.