Karnataka drought relief ರಾಜ್ಯ ಕೇಳಿದ್ದು 18 ಸಾವಿರ ಕೋಟಿ, ಕೇಂದ್ರ ಬಿಡುಗಡೆ ಮಾಡಿದ್ದು 3 ಸಾವಿರ ಕೋಟಿ

ರಾಜ್ಯ ಸರ್ಕಾರದ ಹೋರಾಟಕ್ಕೆ ಜಯಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ  3455 ಕೋಟಿ ರೂಪಾಯಿಗಳ ಬರ ಪರಿಹಾರ ಬಿಡುಗಡೆ ಮಾಡಿದೆ.  

central government drought relief funds released to Karnataka gow

ನವದೆಹಲಿ (ಏ.27): ರಾಜ್ಯ ಸರ್ಕಾರದ ಹೋರಾಟಕ್ಕೆ ಜಯಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ  3455 ಕೋಟಿ ರೂಪಾಯಿಗಳ ಬರ ಪರಿಹಾರ ಬಿಡುಗಡೆ ಮಾಡಿದೆ.  ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ಹಿನ್ನೆಲೆಯಲ್ಲಿ ಈಗ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ.

ಬರ ಕುರಿತು ಪರಿಶೀಲನೆ ನಡೆಸಿದ ರಾಜ್ಯ ಸರ್ಕಾರ 18,174 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಕೆ ಮಾಡಿತ್ತು.  ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3455 ಕೋಟಿ ರೂಪಾಯಿಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ: ಗೃಹ ಸಚಿವ ಪರಮೇಶ್ವರ್

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಸೇರಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು. 

ಬರ ಪರಿಹಾರದ ಬದಲು ರಾಜ್ಯಕ್ಕೆ ಮೋದಿ ಕೊಟ್ಟದ್ದು ಖಾಲಿ ಚೊಂಬು: ರಾಹುಲ್‌ ಗಾಂಧಿ

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿ 7 ತಿಂಗಳಾಗಿತ್ತು. 18,172 ಕೋಟಿ ರು.ಗಳನ್ನು ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯ  ಮಾಡಿತ್ತು. ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಸರ್ಕಾರ ದಾವೆ ಹೂಡಿ ಪ್ರಶ್ನಿಸಿತ್ತು. ಸಂವಿಧಾನಬದ್ದವಾಗಿ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕಿದ್ದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತೀವ್ರ ಬರದಿಂದ ಕಂಗೆಟ್ಟಿರುವ ಕರ್ನಾಟಕದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಕೇಂದ್ರದ  ಮುಂದಿನ ಸೋಮವಾರದೊಳಗೆ ಪರಿಹಾರ ಸಂಬಂಧ ಕ್ರಮ ಕೈಗೊಳ್ಳುತ್ತೇವೆ ಎಂದು ಸುಪ್ರೀಂ ನಲ್ಲಿ ಭರವಸೆ ನೀಡಿತ್ತು. ಸದ್ಯ ಪ್ರಕರಣದ ವಿಚಾರಣೆ ಏ.29ಕ್ಕೆ ನಡೆಯಲಿದೆ.

ಕರ್ನಾಟಕದ ಜೊತೆಗೆ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಕೂಡ ಪರಿಹಾರಕ್ಕಾಗಿ ಸುಪ್ರೀಂ ಮೆಟ್ಟಲೇರಿತ್ತು. ಪ್ರಕೃತಿ ವಿಕೋಪದಲ್ಲಾದ ಪರಿಹಾರವಾಗಿ ತಮಿಳುನಾಡಿಗೆ 276 ಕೋಟಿ ಬಿಡುಗಡೆ ಮಾಡಿದೆ.

Latest Videos
Follow Us:
Download App:
  • android
  • ios