ಪೆಟ್ರೋಲ್ ಡೀಸೆಲ್ ದರ ಏರಿಕೆಗೆ ಬಿಜೆಪಿ ಕಾರಣ: ಕೇಂದ್ರದ ವಿರುದ್ಧ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ!
ಅಸಹಜ ಲೈಂಗಿಕ ದೌರ್ಜನ್ಯ ನಡೆಸಿರುವ ವಿಚಾರವಾಗಿ ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ದೂರು ಕೊಟ್ಟಿದ್ದಾನೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ತಪ್ಪು ಯಾರೇ ಮಾಡಿದ್ರೂ ತಪ್ಪೇ ಎಂದು ವಿಧಾನಪರಿಷತ್ ನೂತನ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು (ಜೂ.23): ಅಸಹಜ ಲೈಂಗಿಕ ದೌರ್ಜನ್ಯ ನಡೆಸಿರುವ ವಿಚಾರವಾಗಿ ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ದೂರು ಕೊಟ್ಟಿದ್ದಾನೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ತಪ್ಪು ಯಾರೇ ಮಾಡಿದ್ರೂ ತಪ್ಪೇ ಎಂದು ವಿಧಾನಪರಿಷತ್ ನೂತನ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ ಆಲನಹಳ್ಳಿ ಕುದೇರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪ್ರಕರಣದ ಕುರಿತು ಪೊಲೀಸರು ನಿಸ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಇದರಲ್ಲಿ ಯಾವುದೇ ಷಡ್ಯಂತ್ರವಿಲ್ಲ ಎಂದರು.
'ಓಹ್, ಸೂರಜ್ ರೇವಣ್ಣ ಕೂಡ ಅರೆಸ್ಟ್ ಆದ್ರಾ? ನಂಗೆ ಗೊತ್ತೇ ಇರಲಿಲ್ಲ' ಎಂದ ಜಿಟಿ ದೇವೇಗೌಡ!
ಇನ್ನು ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು, ಪೆಟ್ರೋಲ್ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಯೇ ಕಾರಣ. ಚುನಾವಣೆ ಸಂದರ್ಭದಲ್ಲಿ ಕಡಿಮೆ ಮಾಡಿದರು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದಾರೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು. ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಚನ್ನಪಟ್ಟಣ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು, ಸ್ಥಳೀಯ ಕಾರ್ಯಕರ್ತರು ಕುಳಿತು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂದರು.
ಪ್ರಜ್ವಲ್, ಸೂರಜ್, ಯಡಿಯೂರಪ್ಪ ಇವರಿಗೆಲ್ಲ ಏನು ಅನಿಸೊಲ್ವ? ಮುಜುಗರ ಆಗೊಲ್ವ? ಪ್ರಿಯಾಂಕ್ ಖರ್ಗೆ
ಇಂದು ಮೈಸೂರಿನ ಆಲನಹಳ್ಳಿ ಕುದೇರು ಮಠದ ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗಮಿಸಿದ್ದರು. ಒಂದೇ ವೇದಿಯಲ್ಲಿ ಬಿವೈ ವಿಜಯೇಂದ್ರ ಹಾಗೂ ಡಾ ಯತೀಂದ್ರ ಸಿದ್ದರಾಮಯ್ಯ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶಾಸಕರಾದ ಜಿ ಟಿ ದೇವೇಗೌಡ ಶ್ರೀವತ್ಸ ಸೇರಿ ಹಲವರು ಭಾಗಿಯಾಗಿದ್ದರು.