Asianet Suvarna News Asianet Suvarna News

ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ: ಕೆಎಂಎಫ್‌ ದಹಿ ಬದಲು ಮೊಸರು ಬಳಸಿ

ರಾಜ್ಯದ ಕೆಎಂಎಫ್‌ನ ಮೊಸರು ಪ್ಯಾಕೆಟ್‌ ಮೇಲೆ ಹಿಂದಿಯ ದಹಿ ಪದ ಬಳಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಾದೇಶಿಕ ಭಾಷೆ ಬಳಸಲು ಅನುಮತಿ ನೀಡಿದೆ. 

Central government yielded to Kannadigas struggle Use KMF mosaru instead of dahi sat
Author
First Published Mar 30, 2023, 8:44 PM IST

ಬೆಂಗಳೂರು (ಮಾ.30): ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಮೇಲೆ ಹಿಂದಿ‌ ಹೇರಿಕೆಗೆ ತೀವ್ರ ವಿರೋಧದ ಬಳಿಕ ಆದೇಶ ಪರಿಷ್ಕರಿಸಿದ ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI), ಪ್ಯಾಕೆಟ್ ಮೇಲಿನ ಮುದ್ರಿತ ಲೇಬಲ್ ಗಳಲ್ಲಿ ಇಂಗ್ಲಿಷ್ ಜೊತೆಗೆ ಪ್ರಾದೇಶಿಕ ಭಾಷೆ ಉಲ್ಲೇಖಿಸಬಹುದೆಂದು ಪರಿಷ್ಕೃತ ಆದೇಶ ಹೊರಡಿಸಿದೆ.

ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಾಧಿಕಾರದ ಆದೇಶದ ವಿರುದ್ಧ ಆಕ್ರೋಶ ತೀವ್ರಗೊಂಡ ಬೆನ್ನಲ್ಲೆ ಪರಿಷ್ಕರಣೆ ಆದೇಶ ಮಾಡಲಾಗಿದೆ. ರಾಜ್ಯ ಹಾಲು ಒಕ್ಕೂಟ ಇಂಗ್ಲೀಷ್‌ನ ಕರ್ಡ್ ಪದದೊಂದಿಗೆ ಮೊಸರು ಹೆಸರನ್ನ ಬಳಕೆ ಮಾಡುವಂತೆ ಸೂಚಿಸಿದೆ. ಈ ಹಿಂದೆ ಕರ್ಡ್ ಪದ ಬಿಟ್ಟು ಹಿಂದಿಯ ಧಹಿ ಪದವನ್ನ ಕಡ್ಡಾಯವಾಗಿ ಬಳಸುವಂತೆ ಸೂಚಿಸಿತ್ತು. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌)ನ ಮೊಸರಿನ ಮೇಲೆ ಹಿಂದಿಯ ಪದ ದಹಿ (Dahi) ಬಳಸಿದ್ದಕ್ಕೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಕನ್ನಡಿಗರ ಭಾರಿ ಹೋರಾಟಕ್ಕೆ ಮಣಿದ ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರವು ಹಿಂದಿನ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

 

ಕೆಎಂಎಫ್‌ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆ: ಸರಣಿ ಟ್ವೀಟ್‌ ಮೂಲಕ ಕುಮಾರಸ್ವಾಮಿ ಕಿಡಿ

ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ: ಕೇಂದ್ರದ ಬಿಜೆಪಿ ಸರ್ಕಾರ ಮತ್ತೆ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ‘ದಹಿ’ ಎಂದು ಮುದ್ರಿಸಲು ಕೆಎಂಎಫ್‌ಗೆ ಎಫ್‌ಎಸ್‌ಎಸ್‌ಎಐ ಆದೇಶ ನೀಡಿರುವುದು ತಪ್ಪು. ಈ ಮೂಲಕ ಕೇಂದ್ರ ಸರ್ಕಾರ ನೇರವಾಗಿಯೇ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್‌ಗಳ ಮೂಲಕ ಕಿಡಿ ಕಾರಿದ್ದಾರೆ. ಅಲ್ಲದೆ, ಯಶವಂತಪುರ ಪಂಚರತ್ನ ಯಾತ್ರೆ ವೇಳೆ ‘ನಂದಿನಿ ಉಳಿಸಿ' ಎಂದು ಮೊಸರು, ಹಾಲಿನ ಹಾರ ಹಾಕಿ ಜೆಡಿಎಸ್‌ ಕಾರ್ಯಕರ್ತರು ಎಚ್ಚರಿಸಿದ್ದರು. ಹಿಂದಿ ಹೇರಿಕೆ ಮೂಲಕ ನಂದಿನಿಯನ್ನು ಅಮುಲ್‌ ಮೂಲಕ ವಿಲೀನ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳ ಮೂಲಕ ಆರೋಪ ಮಾಡಿದ್ದರು. 

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಎಚ್‌ಡಿಕೆ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

ಬೇಲೂರು ಚನ್ನಕೇಶವ ರಥದ ಮುಂದೆ ಕುರಾನ್ ಪಠಣ ಮಾಡಬೇಕೆಂದು ಹೇಳಿಲ್ಲ!: ಕೈಪಿಡಿಯ ಮಾಹಿತಿ ಹೀಗಿದೆ.!

ಕನ್ನಡಿಗರು ಹಿಂದಿ ಹೇರಿಕೆ ಸಹಿಸೊಲ್ಲ: 
ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಕೂಡ ಹಿಂದಿ ಹೇರಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅವರು ಬರೆದುಕೊಂಡ ಟ್ವೀಟ್‌ನಲ್ಲಿ ಮೊನ್ನೆ ಕೆಎಂಎಫ್ ಗೆ ಭೇಟಿ ಕೊಟ್ಟಾಗ ನಂದಿನಿ ಮೊಸರಿನ ಪೊಟ್ಟಣದ ಮೇಲೆ  #ದಹಿ ಎಂದು ಹಿಂದಿಯಲ್ಲಿ ಮುದ್ರಣವಾಗಿ ಬಂದರೆ ಸಾವಿರಾರು ಜನ ಕನ್ನಡಿಗರು ಕನ್ನಡಶಾಲುಗಳೊಂದಿಗೆ ಕೆಎಂಎಫ್ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೇ ಎಂದು ವ್ಯವಸ್ಥಾಪಕರಿಗೆ ಹೇಳಿದ್ದೆವು. ಖಂಡಿತ ಮಾಡೋಲ್ಲ ಅನ್ನೋ ಭರವಸೆ ಕೊಟ್ಟಿದ್ದರು. ಜೊತೆಗೆ ಕನ್ನಡಿಗರು ಹಿಂದಿ ಹೇರಿಕೆ ಸಹಿಸೋಲ್ಲ ಎಂದು ಬರೆದುಕೊಂಡಿದ್ದರು. 

Follow Us:
Download App:
  • android
  • ios