ತಮಿಳುನಾಡಿನ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವ ಮೂಲಕ ಕಾವೇರಿ ಅಚ್ಚುಕಟ್ಟು ಪ್ರದೇಶದ 11 ಜಿಲ್ಲೆಗಳಿಗೆ ಅನ್ಯಾಯ ಮಾಡಿದೆ ಎಂದು ಎಚ್ ಡಿ ರೇವಣ್ಣ ಆರೋಪಿಸಿದರು.
ಬೆಂಗಳೂರು (ಮಾ.10): ಕಾವೇರಿ ನದಿ ನೀರು ಹೆಚ್ಚುವರಿ ಬಳಕೆ ಮಾಡಿಕೊಳ್ಳುವ ತಮಿಳುನಾಡಿನ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವ ಮೂಲಕ ಕಾವೇರಿ ಅಚ್ಚುಕಟ್ಟು ಪ್ರದೇಶದ 11 ಜಿಲ್ಲೆಗಳಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಜೆಡಿಎಸ್ ಸದಸ್ಯ ಎಚ್.ಡಿ.ರೇವಣ್ಣ ಟೀಕಿಸಿದರು.
ನಿಲುವಳಿ ಸೂಚನೆ ವೇಳೆ ಮಾತನಾಡಿದ ಅವರು, ತಮಿಳುನಾಡು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 10,345 ಕೋಟಿ ರು. ಆರ್ಥಿಕ ನೆರವು ನೀಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಪಕ್ಷಾತೀತವಾಗಿ ಇದರ ವಿರುದ್ಧ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು. ಈ ವೇಳೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಆಶ್ವಾಸನೆ ನೀಡಿದರು.
ಮತ್ತೊಂದು ಸಿ.ಡಿ.ಸ್ಫೋಟ: ಸದನದಲ್ಲಿ CD ತೋರಿಸಿದ ಎಚ್.ಡಿ.ರೇವಣ್ಣ ...
ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ 11 ಜಿಲ್ಲೆಗೆ ಯೋಜನೆಯಿಂದ ಸಮಸ್ಯೆಯಾಗಲಿದೆ. ತಮಿಳುನಾಡು ಕೈಗೆತ್ತಿಗೊಂಡಿರುವ ಯೋಜನೆಯಿಂದ ಅಲ್ಲಿನ ಐದು ಜಿಲ್ಲೆಗಳಿಗೆ ಉಪಯೋಗವಾಗಲಿದೆ. ರಾಜ್ಯ ಸರ್ಕಾರವು ರಾಜ್ಯದ ಹಿತ ಕಾಯಲು ಇಂತಹ ಚಿಂತನೆ ಯಾಕೆ ಮಾಡುವುದಿಲ್ಲ ಎಂದು ಪ್ರಶ್ನಿಸಿದರು.
