ಬೆಂಗಳೂರು, (ಡಿ.10): ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ಕೇಂದ್ರಕ್ಕೆ ಮಾಡಿದ್ದ ಶಿಫಾರಸ್ಸುನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಇಂದು [ಸೋಮವಾರ] ಹೈಕೋರ್ಟ್ ಗೆ ಅಫಿಡೇವಿಟ್ ಸಲ್ಲಿಸಿದ ಕೇಂದ್ರ ಸರ್ಕಾರದ ಅಸೋಸಿಯೇಟ್ ಸಾಲಿಸೇಟರ್ ಜನರಲ್ ಪ್ರಭುಲಿಂಗ ನಾವಲಗಿ ವರದಿ ಸಲ್ಲಿಸಿದ್ದಾರೆ.

ಮೋದಿ ಬಸವಣ್ಣನವರ ಭಕ್ತರಾ?ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡ್ತಾರಾ?

ಈ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಮಾಹಿತಿ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆ ಮೂಲಕ ರಾಜ್ಯದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಕ್ಕೆ ಕೇಂದ್ರ ಸರ್ಕಾರ  ದೊಡ್ಡ ಹೊಡೆತ ನೀಡಿದೆ.

ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಈ ಕುರಿತು ಗೃಹ ಇಲಾಖೆಗೆ ವರದಿ ಸಲ್ಲಿಸಿದ್ದು, ಲಿಂಗಾಯತ ಜಾತಿಯೂ ಹಿಂದು ಧರ್ಮದ ಭಾಗವಾಗಿದೆ. 

ಅದಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮಾಹಿತಿ ಕಳುಹಿಸಿತ್ತು. ಆ ವರದಿಯನ್ನು ಎತ್ತಿ ಹಿಡಿದಿರುವ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದೆ.

ಪ್ರತ್ಯೇಕ ಧರ್ಮ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರದ ವಿರುದ್ದ  ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.