Asianet Suvarna News Asianet Suvarna News

Fisherman ಕರಾವಳಿ ಪ್ರದೇಶದ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

* ಕರಾವಳಿ ಪ್ರದೇಶದ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ
* ಸೀಮೆ ಎಣ್ಣೆ  ಬಿಡುಗಡೆ ಮಾಡುವ ಮೂಲಕ ನಾಡ ದೋಣಿ ಮೀನುಗಾರರ ಬೇಡಿಕೆ ಈಡೇರಿಸಿದ ಕೇಂದ್ರ
* ಮಾಹಿತಿ ನೀಡಿದ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

central govt responds to fisherman demand and released 3540 kl kerosene Says shobha karandlaje rbj
Author
Bengaluru, First Published Jan 24, 2022, 10:01 PM IST

ನವದೆಹಲಿ, (ಜ.24): ಕರಾವಳಿಯ (Karavali) ಸಾಂಪ್ರದಾಯಿಕ ನಾಡದೋಣಿ ಮೀನುಗಾರರ(fisherman) ಬೇಡಿಕೆಗೆ ಕೇಂದ್ರ ಸರ್ಕಾರ (Central government) ಸ್ಪಂದಿಸಿದ್ದು, ಕರ್ನಾಟಕ ಸರ್ಕಾರಕ್ಕೆ 2021-2022ನೇ ಸಾಲಿನ 3,540 ಕೆಎಲ್ ಹೆಚ್ಚುವರಿ ಸೀಮೆಎಣ್ಣೆ(Kerosene) ಬಿಡುಗಡೆ ಮಾಡಿದೆ. 

ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇಂದು (ಜ.24) ಕರ್ನಾಟಕ ಸರ್ಕಾರಕ್ಕೆ 2021-22ನೇ ಪಾಲಿನ 3540KL ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಅರಣ್ಯ ವಾಸಿಗಳಿಗೆ ಸೀಮೆಎಣ್ಣೆ ಪೂರೈಕೆ: ಸಚಿವ ಕತ್ತಿ

ಈ ಹಿಂದೆ ಉಡುಪಿ ಮೀನುಗಾರರ ಒಕ್ಕೂಟ ಹೆಚ್ಚುವರಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ಪೆಟ್ರೋಲಿಯಂ ಸಚಿವಾಲಯದ ಗಮನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತಂದಿದ್ದರು. ಸದ್ಯ ಕೇಂದ್ರ ಸರ್ಕಾರ ಸೀಮೆಎಣ್ಣೆ ಬಿಡುಗಡೆ ಮಾಡಲು ನಿರ್ಧರಿಸಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು.

ರಾಜ್ಯದಲ್ಲಿ 10,100 ಕ್ಕೂ ಅಧಿಕ ನಾಡದೋಣಿಗಲಿದ್ದು, 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರ ಜೀವನಾಧಾರವಾಗಿದೆ, ಕೇಂದ್ರ ಸರಕಾರ ನೀಡುವ ಸೀಮೆ ಎಣ್ಣೆಯ ಮೇಲೆ ಈ ನಾಡ ದೋಣಿ ಮೀನುಗಾರಿಕೆಯು ಅವಲಂಬಿತವಾಗಿದೆ.

ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವರು, ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು, ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ ಕೇಳಿಕೊಂಡಿದ್ದರು.

ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇಂದು (ಜ.24) ಕರ್ನಾಟಕ ಸರ್ಕಾರಕ್ಕೆ 2021-22ನೇ ಪಾಲಿನ 3540KL ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಕೇಂದ್ರ ಸರಕಾರ 2021-22ರ ಆರ್ಥಿಕ ವರ್ಷದಲ್ಲಿ 7080KL ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಈಗಾಗಲೇ ಬಿಡುಗಡೆ ಮಾಡಿತ್ತು, ಇದಕ್ಕೆ ಹೆಚ್ಚುವರಿಯಾಗಿ 3540KL ಸೀಮೆ ಎಣ್ಣೆಯನ್ನು ಇಂದು ಬಿಡುಗಡೆ ಮಾಡುವ ಮೂಲಕ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಬೇಡಿಕೆಯನ್ನು ಈಡೇರಿಸಿದೆ.

ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪ್ರಸ್ತಾವನೆ ಮತ್ತು ಕರಾವಳಿಯ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿ, ನಾಡ ದೋಣಿ ಮೀನುಗಾರಿಕೆಗೆ ಅಗತ್ಯವಿರುವ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ, ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಧನ್ಯವಾದ ಹೇಳಿದ್ದಾರೆ.

Follow Us:
Download App:
  • android
  • ios